DharwadDistrictsKarnatakaLatestMain Post

ಮೇ 9 ರಿಂದ ಬೆಳಗ್ಗೆ 5 ಗಂಟೆಯಿಂದಲೇ ದೇವಸ್ಥಾನಗಳಲ್ಲಿ ಸುಪ್ರಭಾತ ಮೊಳಗಲಿ: ಮುತಾಲಿಕ್

ಧಾರವಾಡ: ನಗರದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮೇ.9 ರಿಂದ ಬೆಳಗ್ಗೆ 5 ಗಂಟೆಗೆ ದೇವಸ್ಥಾನದಲ್ಲಿ ಸುಪ್ರಭಾತ ಹಾಗೂ ಓಂಕಾರ ಮೊಳಗಿಸುವಂತೆ ದೇವಸ್ಥಾನದ ಕಮಿಟಿಯವರಿಗೆ ಹಾಗೂ ಅರ್ಚಕರಿಗೆ ಮನವಿ ಸಲ್ಲಿಸಿದ್ದಾರೆ.

ಮಸೀದಿಗಳ ಮೇಲೆ ಇರುವ ಧ್ವನಿ ವರ್ಧಕಗಳಿಂದ ಬರುವ ಶಬ್ದವನ್ನು ನಿಯಂತ್ರಿಸುವಂತೆ ಮುತಾಲಿಕ್ ಅವರು ಈ ಹಿಂದೆಯೇ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಇಂತಿಷ್ಟೇ ಶಬ್ದ ಇರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವಿದ್ದರೂ ಮಸೀದಿಗಳು ಅದನ್ನು ಉಲ್ಲಂಘಿಸುತ್ತಿವೆ. ಹೀಗಾಗಿ ಹಿಂದೂ ದೇವಾಲಯಗಳಲ್ಲೂ ಸುಪ್ರಭಾತ ಹಾಗೂ ಓಂಕಾರ ನಾದ ಮೊಳಗಿಸುವಂತೆ ಅಭಿಯಾನವನ್ನು ಆರಂಭಿಸಿದ್ದಾರೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ನುಡಿಸುವುದು ಒಂದು ದಿನದ ವಿಷಯವಲ್ಲ, ಅದು ಮುಂದುವರಿಯಬೇಕು: ರಾಜ್ ಠಾಕ್ರೆ

ಧಾರವಾಡದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಮುತಾಲಿಕ್, ಮೇ.9 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಸುಪ್ರಭಾತ ಹಾಕುವಂತೆ ಮನವಿ ಮಾಡಿದ್ದು, ಮಸೀದಿಯಲ್ಲಿರುವ ಧ್ವನಿ ವರ್ಧಕ ತೆರವಿಗೆ ಸರ್ಕಾರಕ್ಕೆ ಹಿಂದೂ ಪರ ಸಂಘಟನೆಗಳು ಗಡುವು ನೀಡಿದೆ.

Leave a Reply

Your email address will not be published.

Back to top button