ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ (Love And War) ಚಿತ್ರದಲ್ಲಿ ರಣ್‌ಬೀರ್ ಕಪೂರ್ (Ranbir Kapoor), ಆಲಿಯಾ ಭಟ್ (Aliaa Bhatt), ವಿಕ್ಕಿ ಕೌಶಲ್ (Vicky Kaushal) ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೆಲ ತಿಂಗಳುಗಳಿಂದ ಸದ್ದು ಮಾಡಿತ್ತು. ಆದರೆ ಶೂಟಿಂಗ್ ಶುರುವಾಗೋದು ಯಾವಾಗ? ಎಂಬುದಕ್ಕೆ ಉತ್ತರ ಸಿಕ್ಕಿರಲಿಲ್ಲ. ಅದಕ್ಕೀಗ ಉತ್ತರ ಸಿಕ್ಕಿದೆ. ಇದನ್ನೂ ಓದಿ:ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದೀರಾ? ಎಂದವರಿಗೆ ತಕ್ಕ ಉತ್ತರ ಕೊಟ್ಟ ನಯನತಾರಾ

ಬಹುನಿರೀಕ್ಷಿತ ‘ಲವ್ ಆ್ಯಂಡ್ ವಾರ್’ ಸಿನಿಮಾದ ಶೂಟಿಂಗ್ ನವೆಂಬರ್ 7ರಿಂದ ಮುಂಬೈನಲ್ಲಿ ಶುರುವಾಗಲಿದೆ. ಮೊದಲ ಹಂತದ ಶೂಟಿಂಗ್‌ನಲ್ಲಿ ನಟ ರಣ್‌ಬೀರ್ ಕಪೂರ್ ಮಾತ್ರ ಭಾಗಿಯಾಗುತ್ತಿದ್ದಾರೆ. ಆ ನಂತರ ವಿಕ್ಕಿ ಕೌಶಲ್ ಮತ್ತು ಆಲಿಯಾ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಸದ್ಯ ರಣ್‌ಬೀರ್ ಭಾಗದ ಚಿತ್ರೀಕರಣ ಶುರುವಾಗಲಿದೆ.

ಇನ್ನೂ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣ್‌ಬೀರ್ ಮತ್ತು ಆಲಿಯಾ ಜೊತೆಯಾಗಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಈಗ ಮತ್ತೆ ‘ಲವ್ ಆ್ಯಂಡ್ ವಾರ್’ ಸಿನಿಮಾಗಾಗಿ ಕೈಜೋಡಿಸಿದ್ದಾರೆ. ವಿಕ್ಕಿ ಕೌಶಲ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಟ್ರಯಾಂಗಲ್ ಲವ್ ಸ್ಟೋರಿಯಾಗಿದ್ದು, ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ.

