ಮೈಸೂರು: ಪ್ರೀತಿಸಿದ ಯುವತಿ ಮದುವೆಯಾಗಲು ನಿರಾಕರಿಸಿದಕ್ಕೆ ಪ್ರೇಮಿಯೊಬ್ಬ ನಡು ರಸ್ತೆಯಲ್ಲೇ ಕೈ ಕೊಯ್ದುಕೊಂಡು ರಂಪಾಟ ನಡೆಸಿರುವ ಘಟನೆ ಮೈಸೂರಿನ ಜೆಪಿ ನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ.
ನಗರದ ಜೆ.ಪಿ ನಗರ ನಿವಾಸಿ ಕಾಂತಾ (28) ಎಂಬಾತನೇ ಕೈ ಕೊಯ್ದುಕೊಂಡ ಪ್ರೇಮಿ. ಕಾಂತಾ ರಮಾಬಾಯಿನಗರದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಗುರುವಾರ ಕ್ಷುಲ್ಲಕ ಕಾರಣಕ್ಕೆ ಇಬ್ಬರೂ ಜಗಳವಾಡಿಕೊಂಡಿದ್ದಾರೆ. ಇದರಿಂದ ಬೇಸತ್ತ ಯುವತಿ ನಾನು ನಿನ್ನನ್ನು ಮದುವೆ ಆಗುವುದಿಲ್ಲ ಎಂದು ತಿಳಿಸಿದ್ದಾಳೆ. ಇದರಿಂದ ಮನನೊಂದ ಯುವಕ ಆಕೆಯ ಮುಂದೆಯೇ ಕೈ ಕೊಯ್ದುಕೊಂಡು ತನ್ನ ಹುಚ್ಚಾಟ ಮೆರೆದಿದ್ದಾನೆ.
ನಡು ರಸ್ತೆಯಲ್ಲಿ ಯುವಕ ರಂಪಾಟ ನಡೆಸುತ್ತಿದ್ದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತಂತೆ ಮಾಹಿತಿ ಪಡೆದ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv