Connect with us

Crime

ಪ್ರೀತಿಗೆ ವಿರೋಧ- ಬಾವಿಗೆ ಜಿಗಿದು ಜೋಡಿ ಆತ್ಮಹತ್ಯೆ

Published

on

-ಅಪ್ರಾಪ್ತೆ ಜೊತೆ ಯುವಕನ ಲವ್

ವಿಜಯಪುರ: ಪ್ರೀತಿಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 19 ವರ್ಷದ ಶಿವಾನಂದ್ ಚೌಧರಿ ಎಂಬಾತ 16 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದನು. ಇಬ್ಬರ ಜಾತಿ ಬೇರೆ ಆಗಿದ್ದರಿಂದ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನೊಂದ ಜೋಡಿ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Advertisement
Continue Reading Below

ಇಂದು ಇಬ್ಬರ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಠಾಣೆಯ ಪಿಎಸ್‍ಐ ರವಿ ಯಡವಣ್ಣವರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Click to comment

Leave a Reply

Your email address will not be published. Required fields are marked *