‘ಡ್ರ್ಯಾಗನ್’ ಖ್ಯಾತಿಯ ಪ್ರದೀಪ್ ರಂಗನಾಥನ್ ಜೊತೆ ಕೃತಿ ಶೆಟ್ಟಿ (Krithi Shetty) ರೊಮ್ಯಾನ್ಸ್ ಮಾಡಿದ್ದಾರೆ. ಈ ಸಿನಿಮಾ ರಿಲೀಸ್ ಆಗೋದು ಯಾವಾಗ ಎಂಬ ಪ್ರೇಕ್ಷಕರ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಈ ವರ್ಷ ಸೆಪ್ಟೆಂಬರ್ 18ಕ್ಕೆ ರಿಲೀಸ್ ಮಾಡೋದಾಗಿ ಚಿತ್ರತಂಡ ಬಿಗ್ ಅಪ್‌ಡೇಟ್ ಹಂಚಿಕೊಂಡಿದೆ. ಇದನ್ನೂ ಓದಿ:ಶಾರುಖ್ ಖಾನ್ ‘ಕಿಂಗ್’ ಸಿನಿಮಾದಲ್ಲಿ ಅನಿಲ್ ಕಪೂರ್

View this post on Instagram
ಸ್ಕ್ರಿಪ್ಟ್ ಕೆಲಸ, ವರ್ಕ್ ಶಾರ್ಪ್ ಅಂತ ತೆರೆಮರೆಯಲ್ಲಿ ಸಾಕಷ್ಟು ತಯಾರಿ ಮಾಡಿಕೊಂಡೇ ಈ ಚಿತ್ರವನ್ನು ವಿಘ್ನೇಶ್ ಶಿವನ್ ಕಂಪ್ಲೀಟ್ ಮಾಡಿದ್ದಾರೆ. ಹೀಗಾಗಿ ಕಾರಣಾಂತರಗಳಿಂದ ರಿಲೀಸ್‌ಗೆ ತಡವಾಗಿತ್ತು. ಈಗ ‘ಲವ್ ಇನ್ಶೂರೆನ್ಸ್ ಕಂಪನಿ’ ಸೆ.18ರಂದು ರಿಲೀಸ್‌ಗೆ ಸಜ್ಜಾಗಿದೆ. ಇದನ್ನೂ ಓದಿ:‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ: ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ
’ಡ್ರ್ಯಾಗನ್’ ಮೂಲಕ ಸಕ್ಸಸ್ ಕಂಡಿರುವ ಪ್ರದೀಪ್‌ಗೆ ಕೃತಿ ಜೊತೆಯಾಗಿರೋದ್ರಿಂದ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಹೊಸ ಜೋಡಿಯನ್ನು ಸಿನಿಮಾದಲ್ಲಿ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾಯ್ತಿದ್ದಾರೆ.


