ಹುಬ್ಬಳ್ಳಿ: ಪತ್ನಿಯನ್ನು ಪತಿಯೇ ಮನಬಂದಂತೆ ಕೊಚ್ಚಿ ಕೊಲೆ ಮಾಡಲು ಯತ್ನ ಮಾಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲವ್ ಜಿಹಾದ್ ಆಗಿದ್ದೇನೆ ಎಂದು ಪತ್ನಿಯೇ, ಪತಿ ವಿರುದ್ಧ ಆರೋಪ ಮಾಡಿದ್ದಾಳೆ.
ಸದ್ಯ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿರುವ ಅಪೂರ್ವ ಚೇತರಿಸಿಕೊಳ್ಳುತ್ತಿದ್ದಾರೆ. ಅನ್ಯಧರ್ಮದ ವ್ಯಕ್ತಿಯನ್ನು ಮದುವೆಯಾಗಿರುವ ಹಿಂದೆ ಲವ್ ಜಿಹಾದ್ ಉದ್ದೇಶ ಅಡಗಿತ್ತೆಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಸ್ಕೂಟಿ ಕಲಿಯಲು ಹೋದ ಪತ್ನಿಯನ್ನು ಕೊಲ್ಲಲು ಮುಂದಾದ ಪತಿ
ಅಪೂರ್ವ ಪುರಾಣಿಕ ಅಲಿಯಾಸ್ ಆರ್ಫಾ ಬಾನು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ್ದು, ಸರ್ಕಾರಕ್ಕೆ ಕೈಮುಗಿದು ಮನವಿ ಮಾಡಿಕೊಳ್ಳುತ್ತಿನಿ ದಯವಿಟ್ಟು ರಾಜ್ಯದಲ್ಲಿ ಲವ್ ಜಿಹಾದ್‍ಗೆ ಕಠಿಣ ಕಾನೂನು ತನ್ನಿ. ಎಷ್ಟೋ ಅಮಾಯಕ ಹೆಣ್ಣು ಮಕ್ಕಳು ಪ್ರೀತಿ ಹೆಸರಿನಲ್ಲಿ ಮೋಸ ಹೋಗುತ್ತಿದ್ದಾರೆ ಎಂದು ಲವ್ ಜಿಹಾದ್‍ಗೆ ಒಳಗಾಗಿ ಹಲ್ಲೆಗೊಳ್ಳಗಾದ ಅಪೂರ್ವ ಅಳಲು ತೋಡಿಕೊಂಡಿದ್ದಾರೆ.
ವಿದ್ಯಾಭ್ಯಾಸಕ್ಕೆಂದು ನಾನು ಆಗಾಗ ಇಜಾಜ್ ಆಟೋದಲ್ಲಿ ಹೋಗುತ್ತಿದ್ದೆ. ಇದನ್ನು ದುರುಪಯೋಗ ಪಡಿಸಿಕೊಂಡು ಆತ ನನ್ನ ಮೇಲೆ ಅತ್ಯಾಚಾರ ಎಸಗಿದ ಅತ್ಯಾಚಾರದ ವೀಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡೋಕೆ ಶುರು ಮಾಡಿದ್ದನು ಎಂದಿದ್ದಾರೆ.
ತಾಯಿ ಮತ್ತಿತರರಿಗೆ ಹೇಳಿ ವೀಡಿಯೋ ಬಹಿರಂಗಪಡಿಸೋದಾಗಿ ಎಚ್ಚರಿಸಿದ್ದನು. ಅನಿವಾರ್ಯವಾಗಿ ನಾನು ಮದುವೆಯಾಗೋಕೆ ಒಪ್ಪಿಕೊಂಡೆ ಬಳಿಕ ಆತ ನನಗೆ ನರಕ ತೋರಿಸಿದ್ದಾನೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.