ದಾವಣಗೆರೆ: ಇತ್ತೀಚಿಗೆ ಇಲ್ಲಿನ ಸರಸ್ವತಿ ನಗರದಲ್ಲಿರುವ ಫಿಟ್‌ನೆಸ್ ಕ್ಲಬ್‌ವೊಂದರ ಜಿಮ್ ಟ್ರೇನರ್ ವಿರುದ್ಧ ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿತ್ತು. ಇದೀಗ ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಜಿಮ್ ಟ್ರೇನರ್‌ನನ್ನು ಇಸ್ಮಾಯಿಲ್ ವಿರುದ್ಧ ಸಂತ್ರಸ್ತೆಯೊಬ್ಬರು ದಾವಣಗೆರೆ (Davanagere) ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಿಂದೂ ಮಹಿಳೆಯರೇ ಟಾರ್ಗೆಟ್ – ಜಿಮ್ ಟ್ರೇನರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ಏನಿದು ಪ್ರಕರಣ?
ಜು.10ರಂದು ಈ ಘಟನೆ ಬೆಳಕಿಗೆ ಬಂದಿತ್ತು. ಜಿಮ್‌ಗೆ ಬಂದ ಮಹಿಳೆಯನ್ನು ಟ್ರೈನರ್ ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ, ಹಿಂದೂ ಸಂಘಟನೆಗಳಿಂದ ಜಿಮ್ ಮಾಲೀಕ ಇಸ್ಮಾಯಿಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ಪ್ರೊಫೆಸರ್‌ಗಳು, ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಪ್ರತಿಷ್ಠಿತ ಮನೆತನದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ರೀಲ್ಸ್ ಮಾಡಿ ಬುಟ್ಟಿಗೆ ಬೀಳಿಸಿಕೊಳ್ಳೋದು, ಡ್ರೆಸ್ಸಿಂಗ್ ರೂಮ್‌ಗಳಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಖಾಸಗಿ ವಿಡಿಯೋ ಹಾಗೂ ಫೋಟೋ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹಿಂದೂ ಸಂಘಟನೆಗಳ ಮುಖಂಡರು ಹೊರಹಾಕಿದ್ದಾರೆ. ಅದಾದ ಬಳಿಕ ಕೆಟಿಜೆ ನಗರ ಪೊಲೀಸರು ಇಸ್ಮಾಯಿಲ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ಕೃತ್ಯದ ಕೆಲವು ದೃಶ್ಯಗಳು ಸಿಸಿಟಿವಿಯಲ್ಲಿಯೂ ಸೆರೆಯಾಗಿವೆ ಎನ್ನಲಾಗಿದ್ದು, ಕೆಲ ಫೋಟೋಗಳು ಸಹ ವೈರಲ್ ಆಗಿವೆ. ಇದನ್ನೂ ಓದಿ: ಗೌರಿ ಹಿಂದೂವಲ್ಲ, ಕ್ರಿಶ್ಚಿಯನ್ – ಲವ್ ಜಿಹಾದ್‌ನ ಬ್ರ್ಯಾಂಡ್ ಅಂಬಾಸಿಡರ್ ಟ್ರೋಲ್‌ಗೆ ಅಮೀರ್ ಪ್ರತಿಕ್ರಿಯೆ
