ಕೊಪ್ಪಳ: ಪ್ರೇಮ ವಿವಾಹದ ಹಿಂದೂ-ಮುಸ್ಲಿಮ್ (Hindu-Muslim0 ಜೋಡಿಯೊಂದು ಕೊಪ್ಪಳ (Koppala) ನಗರ ಠಾಣೆಗೆ ಆಗಮಿಸಿ ರಕ್ಷಣೆಗಾಗಿ ಮೊರೆ ಇಟ್ಟಿದೆ.
ಕೊಪ್ಪಳದ ಭಾಗ್ಯನಗರದ ನಿವಾಸಿಗಳಾದ ಪ್ರಜ್ವಲ್ ಹಾಗೂ ಥೈಶಿನ್ ಕಳೆದ 6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಈಗ ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ರಕ್ಷಣೆಗೆ ಅಮೆರಿಕ, ಚೀನಾಗೆ ಪಾಕ್ ಮೊರೆ – ಪ್ರತೀಕಾರ ಕಟ್ಟಿಟ್ಟಬುತ್ತಿ: ಭಾರತ ಗುಡುಗು
ಏಪ್ರಿಲ್ 23 ರಂದು ಪ್ರೇಮಿಗಳು ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬೆನ್ನಲ್ಲೇ ಯುವತಿಯ ಮನೆಯವರು ಪ್ರೇಮಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಬೆಂದ ಬೆನ್ನಲ್ಲೇ ಜೋಡಿಗಳು ರಕ್ಷಣೆಗೆ ಠಾಣೆಯ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ನೀವು ಬರೋದು ಬೇಡ – ತನ್ನ ಪ್ರಜೆಗಳನ್ನೇ ದೇಶಕ್ಕೆ ಸೇರಿಸದ ಪಾಕ್