-ಕೊಲೆಯ ಮರುದಿನ ಅದ್ಧೂರಿ ಬರ್ತ್ ಡೇ ಪಾರ್ಟಿ
ನವದೆಹಲಿ: ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿನಿಯನ್ನು ಮಾಜಿ ಶಿಕ್ಷಕನೊಬ್ಬ ಕೊಲೆ ಮಾಡಿ ಜೀವ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಚರಂಡಿಗೆ ಎಸೆದಿರುವ ಘಟನೆ ನಗರದಲ್ಲಿ ನಡೆದಿತ್ತು. ಘಟನೆ ನಡೆದ 10 ದಿನಗಳ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರಾವಾಲ್ ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಿಕ್ಷಕ ನೌಶದ್ ಅಲಿ (33) ಮತ್ತು ಮೊಹಮ್ಮದ್ ರಜಿಕ್ (28) ಬಂಧಿತ ಆರೋಪಿಗಳು. ಇವರಿಬ್ಬರು ಸೇರಿಕೊಂಡು ಸೆಪ್ಟೆಂಬರ್ 26 ರಂದು ವಿದ್ಯಾರ್ಥಿಯನ್ನು ಕೊಲೆ ಮಾಡಿದ್ದಾರೆ. ನಂತರ ಆಕೆಯನ್ನು ಜೀವಂತವಾಗಿ ಗೋಣಿಚೀಲದಲ್ಲಿ ತುಂಬಿ ಚರಂಡಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಏನಿದು ಪ್ರಕರಣ?
ಮೃತ ವಿದ್ಯಾರ್ಥಿನಿ ಆರೋಪಿ ಅಲಿಯನ್ನು ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದಳು. ಆದ್ದರಿಂದ ಆತ ವಿದ್ಯಾರ್ಥಿನಿಯನ್ನು ಕೊಲೆ ಮಾಡಲು ನಿರ್ಧರಿಸಿದನು. ಅದರಂತೆಯೇ ಸೆಪ್ಟೆಂಬರ್ 26 ರಂದು ಯುವತಿ ಅಲಿಯನ್ನು ಭೇಟಿಯಾಗಲು ಹೋಗಿದ್ದಳು. ಆಗ ಅವಳ ತಲೆಗೆ ರಾಡ್‍ನಿಂದ ಹೊಡೆದಿದ್ದಾನೆ. ತಕ್ಷಣ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ನಂತರ ಇಬ್ಬರು ಆರೋಪಿಗಳು ಸೇರಿಕೊಂಡು ಆಕೆಯನ್ನು ಗೋಣಿಚೀಲದಲ್ಲಿ ಹಾಕಿ ಚರಂಡಿಗೆ ಎಸೆದಿದ್ದಾರೆ. ಯುವತಿ ಗೋಣಿಚೀಲದಲ್ಲಿದ್ದಾಗ ಜೀವಂತವಾಗಿದ್ದಳು. ಆದರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಇತ್ತ ಶಿಕ್ಷಕನನ್ನು ಭೇಟಿಯಾಗಿ ಬರುತ್ತೇನೆಂದು ಮನೆಯಿಂದ ಹೋಗಿದ್ದ ಮಗಳು ಸಂಜೆಯಾದರೂ ಬರಲಿಲ್ಲವೆಂದು ಪೋಷಕರು ಯುವತಿಗೆ ಫೋನ್ ಮಾಡಿದ್ದಾರೆ. ಆಗ ಅವಳ ಫೋನ್ ಸ್ವಿಚ್ ಆಫ್ ಆಗಿತ್ತು. ತಕ್ಷಣ ಈ ಕುರಿತು ನಾಪತ್ತೆ ದೂರನ್ನು ದಾಖಲಿಸಿದ್ದರು. ಕಳೆದ ಭಾನುವಾರ ಚರಂಡಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಆಕೆಯ ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದೆವು. ಅವರು ಬಂದು ಯುವತಿಯ ಬಟ್ಟೆ ಮತ್ತು ಕಿವಿಯೋಲೆಯನ್ನು ನೋಡಿ ಗುರುತಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಪೊಲೀಸರು ಈ ಕುರಿತು ತನಿಖೆಯನ್ನು ಶುರು ಮಾಡಿದ್ದಾರೆ. ಮೊದಲಿಗೆ ಯುವತಿಯ ಫೋನ್ ಕಾಲ್ ವಿವರಗಳನ್ನು ಪರಿಶೀಲನೆ ಮಾಡಿದ್ದಾರೆ. ಆಗ ಅಲಿ ನಂಬರ್ ಗೆ ಹೆಚ್ಚಾಗಿ ಫೋನ್ ಕಾಲ್ ಹೋಗಿತ್ತು. ನಂತರ ಪೊಲೀಸರು ಅನುಮಾನದ ಮೇರೆಗೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈ ವೇಳೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಅಲಿ ಎಂಟನೇ ತರಗತಿಯಿಂದ ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದನು. ಆಗ ಯುವತಿ ಈತನ ವಿದ್ಯಾರ್ಥಿಯಾಗಿದ್ದಳು. ನಂತರ ಯುವತಿ ಆತನನ್ನು ಪ್ರೀತಿ ಮಾಡುತ್ತಿದ್ದು, ಮದುವೆಯಾಗುವಂತೆ ಒತ್ತಾಯ ಮಾಡುತ್ತಿದ್ದಳು. ಆದ್ದರಿಂದ ಆರೋಪಿ ಅಲಿ ಕೊಲೆ ಮಾಡಿದ್ದಾನೆ. ಕೊಲೆಯಾದ ಮರುದಿನ ತನ್ನ ಮನೆಯಲ್ಲಿ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದನು ಎಂದು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.