‘ಲವ್ ಮಾಕ್ಟೈಲ್ 2′ (Love Mocktail 2) ನಟಿ ರೆಚೆಲ್ ಡೇವಿಡ್ (Rachel David) ಅವರು ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ. ಪತಿ ಜೊತೆಗಿನ ಮದುವೆಯ ಸುಂದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮಗನನ್ನು ನೋಡಲು ವಿಜಯಲಕ್ಷ್ಮಿ ಮನೆಗೆ ಆಗಮಿಸಿದ ಮೀನಾ ತೂಗುದೀಪ
‘ಲವ್ ಮಾಕ್ಟೈಲ್ 2’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣಗೆ ನಾಯಕಿಯಾಗಿ ನಟಿಸಿದ್ದ ರೆಚೆಲ್ ಅವರು ಆ್ಯಂಟೋ ಅವರನ್ನು ಕ್ರಿಶ್ಚಿಯನ್ ಪದ್ಧತಿಯಂತೆ ಮದುವೆಯಾಗಿದ್ದಾರೆ. ನಟಿ ಬಿಳಿ ಬಣ್ಣದ ಗೌನ್‌ನಲ್ಲಿ ಮಿಂಚಿದ್ರೆ, ವರ ಕಪ್ಪು ಬಣ್ಣದ ಸೂಟ್ ಧರಿಸಿದ್ದರು. ಚರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ರೆಚೆಲ್ ಜೋಡಿ ಉಂಗುರ ಬದಲಾಯಿಸಿಕೊಂಡು ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ವೈವಾಹಿಕ ಬದುಕಿಗೆ ಕಾಲಿಟ್ಟ ನಟಿಗೆ ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್, ರೆಬಾ ಜಾನ್, ಡಾರ್ಲಿಂಗ್ ಕೃಷ್ಣ ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಶುಭಕೋರಿದ್ದಾರೆ.
View this post on Instagram
ಇನ್ನೂ ಮೂಲತಃ ಬೆಂಗಳೂರಿನವರಾದ ರೆಚೆಲ್ ಕನ್ನಡದ ಲವ್ ಮಾಕ್ಟೈಲ್ 2 , ಚೆಫ್ ಚಿದಂಬರ ಸಿನಿಮಾದಲ್ಲಿ ನಟಿಸಿದ್ದಾರೆ. ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.