Connect with us

Crime

ಪ್ರೀತಿಸುತ್ತಿದ್ದ ಯುವತಿ ಬೇರೋಬ್ಬನೊಂದಿಗೆ ಸಂಪರ್ಕ- ಸಿಟ್ಟಿಗೆದ್ದ ಯುವಕನಿಂದ ಕೊಲೆ

Published

on

ಕೋಲಾರ: ಪ್ರೀತಿಸುತ್ತಿದ್ದವಳು ಬೇರೋಬ್ಬನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂದು ಆರೋಪಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಜಿಲ್ಲೆಯ ಮುಳಬಾಗಿಲು ನಗರದ ಹೊಸಪಾಳ್ಯದಲ್ಲಿ ಮಾ.8 ರಂದು ಪ್ರಿಯಾಂಕ(19)ಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬೆಂಗಳೂರಿನ ಹುಳಿಮಾವಿನಲ್ಲಿ ವಾಸವಿದ್ದ ಆಂಧ್ರ ಮೂಲದ ಆರೋಪಿ ರಾಜೇಶ್‍ನನ್ನು ಬಂಧಿಸಿದ್ದಾರೆ.

ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂದು ಶಂಕಿಸಿ ಆರೋಪಿ ಯುವತಿಯನ್ನು ಕೊಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮುಳಬಾಗಿಲು ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Click to comment

Leave a Reply

Your email address will not be published. Required fields are marked *