CrimeDistrictsKarnatakaLatestMain PostShivamogga

ಪ್ರೇಯಸಿ ದೂರಾಗಿದ್ದಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದು ಪ್ರಾಣ ಬಿಟ್ಟ!

Advertisements

ಶಿವಮೊಗ್ಗ: ಪರಸ್ಪರ ಪ್ರೀತಿಸಿ, ಪೋಷಕರ ಒತ್ತಡಕ್ಕೆ ಮಣಿದು ಕಳೆದೊಂದು ತಿಂಗಳ ಹಿಂದೆ ತವರಿಗೆ ಮರಳಿದ್ದ ಯುವತಿ, ಪ್ರಿಯಕರನಿಂದ ಅಂತರ ಕಾಯ್ದುಕೊಂಡಿದ್ದಳು. ಪ್ರೇಯಸಿ ಅಂತರ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಮನನೊಂದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ದಿಲೀಪ್ (26) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಗಾರ್ಮೆಂಟ್ಸ್‌ವೊಂದರಲ್ಲಿ ಅಸಿಸ್ಟೆಂಟ್ ಕ್ವಾಲಿಟಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ. ದಿಲೀಪ್ ಮೂಲತಃ ಹಾಸನ ಜಿಲ್ಲೆ ಅರಸೀಕೆರೆಯವನಾಗಿದ್ದು, ಅದೇ ಗಾರ್ಮೆಂಟ್ಸ್‌ನಲ್ಲಿ ಸ್ಯಾಂಪಲ್ ಟೈಲರ್ ಆಗಿ ಕೆಲಸ ಮಾಡುತ್ತಿದ್ದ.

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬೆಟ್ಟದಕೂರ್ಲಿಯ ಯುವತಿಯೊಂದಿಗೆ ಪರಸ್ಪರ ಪರಿಚಯವಾಗಿ, ಬಳಿಕ ಅದು ಪ್ರೀತಿ-ಪ್ರೇಮಕ್ಕೆ ತಿರುಗಿತ್ತಂತೆ. ಈ ವಿಷಯ ತಿಳಿದ ದಿಲೀಪ್ ಮನೆಯಲ್ಲಿ ಪೋಷಕರು ಈ ಸಂಬಂಧವನ್ನು ಒಪ್ಪದ ಕಾರಣ, 2022ರ ಜನವರಿ 2ರಂದು ದಿಲೀಪ್ ತನ್ನ ಪ್ರೇಯಸಿಗಾಗಿ ಪೋಷಕರೊಂದಿಗೆ ಸಂಬಂಧವನ್ನೇ ಕಡಿದುಕೊಂಡು ಬಂದಿದ್ದನಂತೆ.

ಹೀಗೆ ಪ್ರಾಣಕ್ಕಿಂತ ಹೆಚ್ಚಾಗಿ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಪ್ರೇಯಸಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗದಿರಲಿ ಎಂದು ದಿಲೀಪ್ ಹಗಲೂ ರಾತ್ರಿಯೆನ್ನದೆ ಕೆಲಸ ಮಾಡಿ ಕೈತುಂಬಾ ಹಣ ಸಂಪಾದಿಸುತ್ತಿದ್ದನಂತೆ. ಆದರೆ, ನಂತರದ ದಿನಗಳಲ್ಲಿ ಯುವತಿಗೆ ಏನಾಯಿತೋ ಗೊತ್ತಿಲ್ಲ ತಾಯಿಗೆ ಅನಾರೋಗ್ಯದ ನೆಪ ಹೇಳಿ ಬೆಂಗಳೂರಿನಿಂದ ತವರಿಗೆ ಬಂದಿದ್ದಾಳೆ. ಅಲ್ಲದೆ, ದಿಲೀಪ್ ನೊಂದಿಗೆ ಅಂತರ ಕಾಯ್ದುಕೊಂಡಿದ್ದಳಂತೆ.

POLICE JEEP

ಬಳಿಕ ಯುವತಿಗೆ ಅದೇ ಊರಿನ ಬೇರೊಬ್ಬನೊಂದಿಗೆ ಮೇ 20ರಂದು ಮದುವೆಯಾಗಿರುವ ವಿಷಯ ತಿಳಿದ ದಿಲೀಪ್, ಬೆಂಗಳೂರಿನಿಂದ ಆನವಟ್ಟಿಯ ತಲ್ಲೂರು ಗ್ರಾಮಕ್ಕೆ ಇದೇ 24ರಂದು ಬಂದಿದ್ದಾನೆ. ಅಷ್ಟರೊಳಗೆ ತನ್ನ ಪ್ರಿಯತಮೆಯ ವಿವಾಹವಾಗಿರುವುದು ಅವನಿಗೆ ತಿಳಿದಿದೆ. ಇದರಿಂದ ಮನನೊಂದ ದಿಲೀಪ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದಾನೆ. ಯುವತಿ ವಾಸವಿರುವ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮಕ್ಕೆ ತೆರಳಿ, ಅಲ್ಲಿನ ಕೆರೆ ಏರಿ ಮೇಲೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಡೀಸೆಲ್ ಕೊರತೆ- ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ: BMTC ಎಂಡಿ ಸ್ಪಷ್ಟನೆ

ಸ್ಥಳೀಯರು ಆಕಸ್ಮಿಕವಾಗಿ ದಿಲೀಪ್ ಬಿದ್ದಿರುವುದನ್ನು ಗಮನಿಸಿದ್ದು, ಪಕ್ಕದಲ್ಲೇ ವಿಷದ ಬಾಟಲಿಯನ್ನು ನೋಡಿ ತಕ್ಷಣ ದಿಲೀಪ್‍ನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಆತ ಬದುಕುಳಿಯಲಿಲ್ಲ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಯಮಗಳನ್ನು ಮೀರಿ ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ

Live Tv

Leave a Reply

Your email address will not be published.

Back to top button