ದಾವಣಗೆರೆ: ಮನನೊಂದು ಪ್ರೇಮಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಕ್ಯಾಂಪ್ ನಲ್ಲಿ ನಡೆದಿದೆ.
ಗಣೇಶ್(22) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಮೃತ ಗಣೇಶ್ ಶಿವಮೊಗ್ಗ ತಾಲ್ಲೂಕಿನ ನಾಗಸಮುದ್ರ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಮಂಗಳವಾರ ಯುವತಿ ಮನೆಯವರು ಗಣೇಶನಿಗೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಮನನೊಂದು ಮಂಗಳವಾರ ತಡರಾತ್ರಿ ಗಣೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ.
Advertisement
ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.