ನವದೆಹಲಿ: ದಕ್ಷಿಣ ದೆಹಲಿಯ ಫ್ಲಾಟ್‍ವೊಂದರಲ್ಲಿ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನು ಕೊಂದು ನಂತರ ತಾನು ನೇಣಿಗೆ ಶರಣಾಗಿರುವ ಘಟನೆ ಸೋಮವಾರದಂದು ನಡೆದಿದೆ.
ಅಭಿಷೇಕ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರೇಮಿ. ಅಭಿಷೇಕ್ ಪ್ರೇಯಸಿ ಹಾಗೂ ಅವಳ ಗೆಳತಿ ಕಳೆದ ಎರಡು ತಿಂಗಳಿಂದ ಒಟ್ಟಿಗೆ ದೆಹಲಿಯ ಸುಮನ್ ಕಾಲೋನಿಯ ಫ್ಲ್ಯಾಟ್ ವೊಂದರಲ್ಲಿ ವಾಸಿಸುತ್ತಿದ್ದರು. ಸೋಮವಾರ ಸಂಜೆ 7.30 ಸುಮಾರಿಗೆ ಯುವತಿಯ ಗೆಳತಿ ತಮ್ಮ ಫ್ಲ್ಯಾಟ್ ಬಾಗಿಲು ಒಳಗಿನಿಂದ ಲಾಕ್ ಆಗಿದೆ ಒಳಗೆ ಕಳ್ಳರು ಸೇರಿರಬಹುದು ಎಂದು ಪೊಲೀಸರಿಗೆ ಕರೆಮಾಡಿ ತಿಳಿಸಿದ್ದಳು. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ಒಳಗೆ ಹೋದಾಗ ಯುವತಿ ಹಾಗೂ ಅಭಿಷೇಕ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಕಳೆದ ಹಲವು ವರ್ಷಗಳಿಂದ ಅಭಿಷೇಕ್ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಆದರೆ ಕೆಲದಿನಗಳಿಂದ ಅವರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪ ಉಂಟಾಗಿತ್ತು. ಇದರಿಂದ ಮನನೊಂದಿದ್ದ ಅಭಿಷೇಕ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಬಳಿಕ ಏಕಾಏಕಿ ಯುವತಿಯ ಫ್ಲ್ಯಾಟ್‍ಗೆ ತೆರಳಿದ್ದ ಅಭಿಷೇಕ್ ಆಕೆಯ ಕತ್ತು ಕೊಯ್ದು ಸಾಯಿಸಿ ನಂತರ ತಾನು ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡುಕೊಂಡಿದ್ದಾನೆ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ದಕ್ಷಿಣ ದೆಹಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv