ಚಾಮರಾಚನಗರ: ಪೋಷಕರು ಮದುವೆಗೆ ವಿರೋಧಿಸಿದ್ದಕ್ಕೆ ಯುವ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿಯಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಉಗನಿಯ ಗ್ರಾಮದ ಕಿರಣ್ ಹಾಗೂ ಸಂಗೀತಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಜಾಗೇರಿ ಸಮೀಪದ ಗವಿರಾಯಸ್ವಾಮಿ ಬೆಟ್ಟದಲ್ಲಿ ಎರಡು ಮೃತದೇಹ ಕೊಳೆತು ವಾಸನೆ ಬರುತ್ತಿತ್ತು.
ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಹೊಂಡ ಒಂದರಲ್ಲಿ ಕಿರಣ್ ಹಾಗೂ ಸಂಗೀತಾ ಮೃತ ದೇಹ ಪತ್ತೆಯಾಗಿದೆ.
ಕಿರಣ್ ಹಾಗೂ ಸಂಗೀತಾ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಇಬ್ಬರ ಮನೆಯಲ್ಲಿಯೂ ವಿರೋಧ ವ್ಯಕ್ತವಾಗಿತ್ತು ಮತ್ತು ಮದುವೆಗೆ ಒಪ್ಪಿಗೆ ನೀಡರಲಿಲ್ಲ. ಇದರಿಂದ ಮನನೊಂದ ಪ್ರೇಮಿಗಳು ಮನೆ ಬಿಟ್ಟು ಬಂದಿದ್ದರು.
ಘಟನಾ ಸ್ಥಳದಲ್ಲಿ ಕೀಟನಾಶಕ ಬಾಟಲ್ ಪತ್ತೆಯಾಗಿದ್ದು, ಮೂರು ದಿನಗಳ ಹಿಂದೆಯೇ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]