ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ; ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ

Public TV
1 Min Read
lovers suicide bellary

ಬಳ್ಳಾರಿ: ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿ ನಡೆದಿದೆ.

ರಾಜ (23) ಹಾಗೂ ಪವಿತ್ರ (20) ಮೃತ ದುರ್ದೈವಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳು. ಸಿರಗುಪ್ಪದ ಆದೋನಿ ರಸ್ತೆಯ ಜಮೀನೊಂದರಲ್ಲಿ ರಾಜ ಹಾಗೂ ಪವಿತ್ರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮನ ಸಾವಿನ ಅಗಲಿಕೆಯಿಂದ ಮನನೊಂದು ಅಣ್ಣ, ತಂಗಿ ಆತ್ಮಹತ್ಯೆ

ಇವರಿಬ್ಬರೂ ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡರಾತ್ರಿ ಮನೆ ಬಿಟ್ಟು ಬಂದಿದ್ದರು. ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Share This Article