Connect with us

ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ- ಪ್ರಿಯತಮೆ ಸಾವು

ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ- ಪ್ರಿಯತಮೆ ಸಾವು

ಬೆಳಗಾವಿ: ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಪ್ರೇಮಿಗಳಿಬ್ಬರು ಬುಧವಾರ ತಡರಾತ್ರಿ ವಿಷ ಸೇವಿಸಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಯುವತಿ ಸಾವನ್ನಪ್ಪಿದ್ದಾರೆ.

ಲಕ್ಷ್ಮೀ (19) ಮೃತ ಯುವತಿ. ಇನ್ನೂ ತೀವ್ರ ಅಸ್ವಸ್ಥಗೊಂಡ ಪ್ರಿಯತಮ ಮಹಾಂತೇಶ್ ಘೋರ್ಪಡೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಮಹಾಂತೇಶರನ್ನು ಘಟಪ್ರಭಾದ ಕರ್ನಾಟಕ ಹೆಲ್ತ್ ಇನ್‍ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತ ಯುವತಿ ಸಾವನ್ನಪ್ಪಿದ ವಿಷಯ ತಿಳಿದ ಮಾಹಾಂತೇಶ ಸದ್ಯ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ.

ಹುಕ್ಕೇರಿ ತಾಲೂಕಿನ ಕಡಕಲಾಟ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮತ್ತು ಲಕ್ಷ್ಮೀ ಹುಕ್ಕೇರಿ ಪಟ್ಟಣದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಬ್ಬರೂ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಇನ್ನೂ ಲಕ್ಷ್ಮೀರಿಗೆ ಮನೆಯಲ್ಲಿ ಬೇರೆ ಯುವಕನೊಂದಿಗೆ ವಿವಾಹ ದಿನಾಂಕವನ್ನು ನಿಗಧಿ ಮಾಡಿದ್ದರು. ಇದರಿಂದ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

Advertisement
Advertisement