ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಸಿಡಿಲು ಮಲ್ಲಿಕಾರ್ಜುನ ಬೆಟ್ಟದಲ್ಲಿ ಮರವೊಂದಕ್ಕೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.
ಡಿ.ಎಲ್.ವೀಣಾ ಹಾಗೂ ಕೆ.ಎನ್.ಸ್ವಾಮಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಟ್ಟದ ವೀರಭದ್ರನಗುಡಿ ಸಮೀಪ ಮರವೊಂದಕ್ಕೆ ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬೆಟ್ಟದ ದೇವಸ್ಥಾನದ ಬಳಿ ಹೋಗಿದ್ದ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ವೀಣಾ ಹಾಗೂ ಸ್ವಾಮಿ ಇಬ್ಬರೂ ಒಂದೇ ಪತ್ರದಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೋಷಕರು ತಮ್ಮ ಪ್ರೀತಿಯನ್ನು ಒಪ್ಪದಿದ್ದಾಗ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ ಈ ಪ್ರಕರಣದಲ್ಲಿ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿರುವುದು ಅವರ ಕುಟುಂಬಕ್ಕೆ ಗೊತ್ತಿರಲಿಲ್ಲ. ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಮೇಲೆ ಇಬ್ಬರ ಕುಟುಂಬದವರಿಗೂ ಇವರ ಪ್ರೀತಿ ಬಗ್ಗೆ ಗೊತ್ತಾಗಿದೆ ಎನ್ನಲಾಗಿದೆ.
ನಮ್ಮ ಎರಡು ಕುಟುಂಬದವರು ಒಳ್ಳೆಯವರು. ಆದರೆ ಇವರನ್ನು ನಾವೇ ಅವರನ್ನು ಅರ್ಥ ಮಾಡಿಕೊಂಡಿಲ್ಲ ಎಂದು ವೀಣಾ ಹಾಗೂ ಸ್ವಾಮಿ ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ. ಸದ್ಯ ಇವರ ಆತ್ಮಹತ್ಯೆಗೆ ಬೇರೆ ಏನೋ ಕಾರಣ ಇದೆ ಎಂಬುದು ತಿಳಿದು ಬಂದಿದೆ. ಇವರಿಬ್ಬರ ಪ್ರೀತಿ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಎರಡು ಕುಟುಂಬದವರು ಬೆಟ್ಟದಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವೀಣಾ ಹಾಗೂ ಸ್ವಾಮಿ ಇಬ್ಬರು ಒಂದೇ ಪತ್ರದಲ್ಲಿ ಡೆತ್ ನೋಟ್ ಬರೆದು ಮರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಸದ್ಯ ಈ ಬಗ್ಗೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv