ಕೋಲಾರ: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿ ಕುಪ್ಪಂ ರೈಲ್ವೇ ನಿಲ್ದಾಣದಲ್ಲಿ ಇಂದು ನಡೆದಿದೆ.
ಜಿ.ಎಸ್ ಮೌನಿಷಾ ಹಾಗೂ ಹಿಮಚಂದ್ರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಮೂಲತಃ ತಮಿಳುನಾಡಿನ ತಿರುವೆಲ್ಲೂರು ನಿವಾಸಿಗಳು ಎಂದು ಹೇಳಲಾಗಿದೆ. ಮೌನಿಷಾ ಹಾಗೂ ಹಿಮಚಂದ್ರ ಕುಪ್ಪಂನ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಬಿಎಸ್‍ಸಿ ಓದುತ್ತಿದ್ದರು. ಬಹಳ ವರ್ಷಗಳಿಂದ ಮೌನಿಷಾ ಹಾಗೂ ಹಿಮಚಂದ್ರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಯನ್ನು ಇಬ್ಬರ ಮನೆಯವರೂ ಒಪ್ಪಲಿಲ್ಲ.
ಪೋಷಕರು ತಮ್ಮ ಪ್ರೀತಿಯನ್ನು ತಿರಸ್ಕರಿಸಿದ ಕಾರಣದಿಂದ ಮನನೊಂದಿದ್ದ ಪ್ರೇಮಿಗಳಿಬ್ಬರು ಇಂದು ಕುಪ್ಪಂ ರೈಲ್ವೇ ನಿಲ್ದಾಣದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಘಟನೆ ಕುರಿತು ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv