ಬಾಗಲಕೋಟೆ: ಬೆಳಗ್ಗೆ ಮದುವೆ (Marriage) ಮಾಡಿಕೊಂಡು ಮಧ್ಯಾಹ್ನದ ವೇಳೆಗೆ ಮಚ್ಚಿನಿಂದ ಹೊಡೆದಾಡಿಕೊಂಡು ನವಜೋಡಿ ಸಾವನ್ನಪ್ಪಿದ ಘಟನೆ ಇತ್ತೀಚೆಗೆ ಕೋಲಾರದಲ್ಲಿ ನಡೆದಿತ್ತು. ಇದಕ್ಕೆ ವಿರುದ್ಧವೆಂಬಂತೆ ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ (Bagalakote) ನಡೆದಿದೆ.
ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು (Lovers). ಇದನ್ನೂ ಓದಿ: ಧಾರ್ಮಿಕ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಫೋಟೋ – ಮುಂದೇನಾಯ್ತು?
ಒಂದೇ ಮರಕ್ಕೆ ನೇಣು:
ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಆದ್ರೆ ಸಚಿನ್ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Bigg Boss Kannada 11: ದೊಡ್ಮನೆ ಆಫರ್ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ