ಕೊಪ್ಪಳ: ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಅಡವಿಬಾವಿ ಗ್ರಾಮದಲ್ಲಿ ನಡೆದಿದೆ.
ಅಮರೇಶ ಮಾಲೀ ಪಾಟೀಲ್(21), ಯಲ್ಲಮ್ಮ ಗೋನಾಳ (18) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಇದನ್ನೂ ಓದಿ: ಮದುವೆ ಸಮಾರಂಭದಲ್ಲಿ ಹಲ್ಲಿ ಬಿದ್ದಿದ್ದ ಮಜ್ಜಿಗೆ ಕುಡಿದು 16 ಮಂದಿ ಅಸ್ವಸ್ಥ
Advertisement
Advertisement
ಯುವತಿ ಮನೆಯಲ್ಲೇ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ತಾವರಗೇರ ಪೋಲೀಸರು ತನಿಖೆ ಮುಂದುವರಿಸಿದ್ದಾರೆ.