ಹಾಸನ: ಜಿಲ್ಲೆಯ ವಿವಿಧೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರು ಭಯಭೀತರಾಗಿದ್ದಾರೆ. ಹಾಸನ ನಗರದ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ.
Advertisement
ಐದು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಹಾಸನ ನಗರವಷ್ಟೇ ಅಲ್ಲದೆ ಇತಿಹಾಸ ಪ್ರಸಿದ್ಧ ವಿಶ್ವವಿಖ್ಯಾತ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಭೂಕಂಪನ ಅನುಭವವಾಗಿದೆ. ಇದರಿಂದ ಆತಂಕಗೊಂಡ ನಿವಾಸಿಗಳು ಮನೆಯ ಹೊರಗಡೆ ಓಡಿ ಬಂದಿದ್ದಾರೆ. ಜನರು ನೀಡಿದ ಮಾಹಿತಿ ಮೇಲೆ ಸ್ಥಳಕ್ಕೆ ಹಳೆಬೀಡು ಪೊಲೀಸರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದೇ ಕುಟುಂಬದ ಐವರು ಸಾವು- ಆತ್ಮಹತ್ಯೆಗೂ ಮುನ್ನ ಪುಟ್ಟ ಕಂದಮ್ಮನ ಕೊಂದ್ರು!
Advertisement
Advertisement
ಹಾಸನ ಸುತ್ತಮುತ್ತ 5 ಗಂಟೆ 10 ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೇಲೂರು ಸುತ್ತಮುತ್ತ ಸಂಜೆ 6 ಗಂಟೆ 10 ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ. ಸಾಲಗಾಮೆ ಹೋಬಳಿಯ, ರಾಯಪುರದ ಬಳಿ 2.3 ರಷ್ಟು ಕಂಪನ ದಾಖಲಾಗಿದ್ದು, ಈ ಕಂಪನಕ್ಕೆ ಜನರು ಹೆದರುವ ಅವಶ್ಯಕತೆಯಿಲ್ಲ. ಇದರಿಂದ ಯಾವುದೇ ಸಮಸ್ಯೆಯಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾರವಾರದ ಕಡಲತೀರದ ಮರಳಿನಲ್ಲಿ ಅರಳಿದ ಮೋದಿ ಕಲಾಕೃತಿ
Advertisement