ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ (Bay Of Bengal) ವಾಯಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಮಳೆ ಹಿನ್ನೆಲೆ ಬೆಂಗಳೂರಿಗೆ (Bengaluru) ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಜೋರು ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇದನ್ನೂ ಓದಿ: ಶಾಲೆಯಲ್ಲಿ ಹಾಜರಾತಿ ವೇಳೆ ‘Yes Sir’ ಬದಲು ಜೈ ಶ್ರೀರಾಮ್ ಅಂತ ಹೇಳಿ: ವಿದ್ಯಾರ್ಥಿಗಳಿಗೆ ಯತ್ನಾಳ್ ಕರೆ
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ & ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಡಿಟೆನ್ಷನ್ ಸೆಂಟರ್‌ನಲ್ಲಿದ್ದ ನಾಲ್ವರು ಉಗಾಂಡ ಮಹಿಳೆಯರು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ – ಕಿಟಕಿ ಗ್ರಿಲ್ ಮುರಿದು ಪರಾರಿ

