ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (LPG Cylinder Blast) ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ (UttaraKannada) ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.
ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ, ಫ್ರಿಜ್ , ವಾಶಿಂಗ್ ಮಿಷನ್, ಅಡುಗೆ ಸಾಮಗ್ರಿ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಘಟನೆಯಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಇದನ್ನೂ ಓದಿ: ಪಿಂಚಣಿ, ನರೇಗಾ ಹಣ ಸಾಲ ಮರುಪಾವತಿಗೆ ಹೊಂದಿಸದಂತೆ ʼಕೈʼ ಸರ್ಕಾರ ಆದೇಶ ನೀಡಲಿ: ಅಶೋಕ್ ಆಗ್ರಹ
ಸ್ಫೋಟದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಮನೆ ಮಾಲೀಕ ನಿಲೇಶ್ ತಾಳೇಕರ್ ಗಾಯಗೊಂಡಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ (Fire Department) ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು