ಶ್ರೀನಗರ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ ಹಾಗೂ 15 ಜನರು ಗಾಯಗೊಂಡಿರುವ ಘಟನೆ ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿ ನಡೆದಿದೆ.
ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸ್ಕ್ರ್ಯಾಪ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಅಂಗಡಿಯಲ್ಲಿ ಎಲ್‍ಪಿಜಿ ಸಿಲಿಂಡರ್‌ಗಳನ್ನು ಅಂಗಡಿಯೊಳಗೆ ಇಡಲಾಗಿತ್ತು. ಇದರಿಂದಾಗಿ ಪಕ್ಕದ ಕಟ್ಟಡಗಳಿಗೆ ವ್ಯಾಪಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದ ನಂತರ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಈ ಬಗ್ಗೆ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ಕು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಂಸದ ವಿಜಯ್ ಗೋಯೆಲ್ ಫೋನ್ ಕದ್ದ ಖತರ್ನಾಕ್ ಕಳ್ಳ
Advertisement
ವಿಷಯ ತಿಳಿಸಿದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ತೀವ್ರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
An ex-gratia of Rs.5 Lakh each to be given to the families of the deceased in Jammu LPG Cylinder blast incident. Ex gratia of Rs.1 Lakh to be given to the seriously injured and Rs.25,000 to those with minor injuries.
— Office of LG J&K (@OfficeOfLGJandK) March 14, 2022
ಜಮ್ಮು ಮತ್ತು ಕಾಶ್ಮಿರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಜಮ್ಮು ಎಲ್‍ಪಿಜಿ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:
ಚಿನ್ನದ ನಾಡಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರಾ ಸಿದ್ದರಾಮಯ್ಯ..?