ನವದೆಹಲಿ: ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿವೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 25 ರೂ.ಏರಿಕೆಯಾಗಿದೆ.
ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 859.5 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ 886 ರೂ. ಮುಂಬೈನಲ್ಲಿ 859.5 ರೂ. ಲಕ್ನೋದಲ್ಲಿ 897.5 ರೂ.ಗೆ ತಲುಪಿದೆ. ವಾಣಿಜ್ಯ ಬಳಕೆಯ 19 ಕೆಜಿ ತೂಕದ ಸಿಲಿಂಡರ್ ಬೆಲೆ 68 ರೂ.ನಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಒಂದು ಸಿಲಿಂಡರ್ ಬೆಲೆ 1,618 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 837.50 ರೂ.ಗಳಿಂದ 863 ರೂ.ಗೆ ತಲುಪಲಿದೆ ಎಂದು ವರದಿಯಾಗಿದೆ.
Advertisement
Advertisement
ತೈಲ ಕಂಪನಿಗಳು ಪ್ರತಿ ತಿಂಗಳು ಮೊದಲ ಮತ್ತು 15ನೇ ತಾರೀಖಿನಂದು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ದರವನ್ನು ಪರಿಶೀಲಿಸುತ್ತವೆ. ಇದಕ್ಕೂ ಮೊದಲು ಜುಲೈ 1ರಂದು ತೈಲ ಕಂಪನಿಗಳು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂ.ನಷ್ಟು ಹೆಚ್ಚಿಸಿದ್ದವು.
Advertisement
Advertisement
ಮನೆಯಲ್ಲಿಯೇ ಕುಳಿತು ಕನೆಕ್ಷನ್ ಪಡೆದುಕೊಳ್ಳಿ:
ಈಗ ನೀವು ಹೊಸ ಎಲ್‍ಪಿಜಿ ಕನೆಕ್ಷನ್ ಪಡೆಯಲು ಡಿಸ್ಟ್ರಿಬ್ಯೂಟರ್ ಆಫಿಸ್ ಗೆ ಹೋಗುವ ಅವಶ್ಯಕತೆ ಇಲ್ಲ. ನೀವು ಹೊಸ ಕನೆಕ್ಷನ್ ಪಡೆಯಲು ಇಚ್ಛಿಸಿದ್ರೆ ಕೇವಲ ಒಂದು ಮಿಸ್ಡ್ ಕಾಲ್ ನೀಡಬೇಕು. ಈ ವ್ಯವಸ್ಥೆಯನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಓಸಿ) ಕಲ್ಪಿಸಿದೆ. ಇದನ್ನೂ ಓದಿ: ತಾಲಿಬಾನ್ ಉಗ್ರರ ಸರ್ಕಾರಕ್ಕೆ ಪಾಕಿಸ್ತಾನ, ಚೀನಾ, ಇರಾನ್ ಬೆಂಬಲ
ಹೊಸ ಕನೆಕ್ಷನ್ ಗಾಗಿ 8454955555 ಸಂಖ್ಯೆಗೆ ಮಿಸ್ಡ್ ಕಾಲ್ ನೀಡಬೇಕು. ಸಿಲಿಂಡರ್ ತುಂಬಿಸಬೇಕಾದ್ರೆ ಇದೇ ನಂಬರ್ ಬಳಸಬಹುದು. ಗ್ಯಾಸ್ ರೀಫಿಲ್ಲಿಂಗ್ ಗಾಗಿ ನಿಮ್ಮ ಕಡ್ಡಾಯವಾಗಿ ರಿಜಿಸ್ಟರ್ ನಂಬರ್ ಬಳಸಬೇಕು. ಇದನ್ನೂ ಓದಿ: ಉಗ್ರರಿಗೆ ಆಟ, ಮಹಿಳೆಯರಿಗೆ ಪ್ರಾಣ ಸಂಕಟ – ಷರಿಯತ್ ಏನು ಹೇಳುತ್ತದೆ? ತಾಲಿಬಾನ್ ಕಾನೂನು ಏನು?