ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ (LPG Price Hike) ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ವಾಣಿಜ್ಯ ಬಳಕೆ ಸಿಲಿಂಡರ್ (Commercial Cylinder) ಬೆಲೆ ಏರಿಕೆಯಾಗಿದೆ.
19 ಕೆಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದನ್ನೂ ಓದಿ: ಸಿಕ್ಕಿಬೀಳೋ ಭಯದಲ್ಲಿ ಕದ್ದಿದ್ದ 30 ಲಕ್ಷದ ವಜ್ರದ ಉಂಗುರವನ್ನು ಟಾಯ್ಲೆಟ್‌ನಲ್ಲಿ ಫ್ಲಶ್ ಮಾಡಿದ್ಳು!
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್), ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.
ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ವಾಣಿಜ್ಯ LPG ಗೆ ಮೊದಲ ಬೆಲೆ ಏರಿಕೆಯಾಗಿದೆ. ಇದನ್ನೂ ಓದಿ: ಜಸ್ಟ್ 999 ರೂ.ಗೆ ಜಿಯೋ ಭಾರತ್ 4ಜಿ ಫೋನ್ ಬಿಡುಗಡೆ – ಗುಣ ವೈಶಿಷ್ಟ್ಯಗಳೇನು?
ಮೇ ತಿಂಗಳಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆ ಮಾಡಿತ್ತು. ಹೀಗಾಗಿ ಪ್ರತಿ ಸಿಲಿಂಡರ್ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು.
Web Stories