ಮುಂಬೈ: ಮಂಗಳವಾರ ರಾತ್ರಿ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಅವರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ.
Advertisement
ಐಪಿಎಲ್ ನೀತಿ ಸಂಹಿತೆಯ ಹಂತ 1ರ ಪ್ರಕಾರ ರಾಹುಲ್‍ಗೆ ದಂಡ ವಿಧಿಸಲಾಗಿದೆ. ತಂಡದ ಸಹ ಆಟಗಾರ ಮಾರ್ಕಸ್ ಸ್ಟೊಯಿನಿಸ್ ಅವರು ಸಹ ಅದೇ ಪಂದ್ಯದಲ್ಲಿ ಐಪಿಎಲ್‍ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ವಾಗ್ದಂಡನೆಗೆ ಗುರಿಯಾಗಿದ್ದಾರೆ. ಮಾರ್ಕಸ್ ಸ್ಟೊಯಿನಿಸ್ ಕೂಡಾ ಐಪಿಎಲ್ ನೀತಿ ಸಂಹಿತೆಯ ಹಂತ 1 ಅಡಿ ದಂಡ ಕಟ್ಟಬೇಕಾಗಿದೆ. ಇದನ್ನೂ ಓದಿ: ಲಕ್ನೋಗೆ ಕೆಜಿಎಫ್ ಚಿತ್ರದ ಡೈಲಾಗ್ ಮೂಲಕ ಟಕ್ಕರ್ ನೀಡಿದ ಆರ್‌ಸಿಬಿ
Advertisement
Advertisement
ಜೋಶ್ ಹ್ಯಾಜಲ್‍ವುಡ್ ಎಸೆತದಲ್ಲಿ ಸ್ಟೊಯಿನಿಸ್ ಔಟಾಗಿದ್ದರು. ಆದರೆ ಇದಕ್ಕೂ ಮುನ್ನ ಅವರು ಅಂಪೈರ್ ಜೊತೆ ವಾಗ್ದಾಳಿ ನಡೆಸಿದರು. ಅವರ ಮಾತುಗಳು ಸ್ಟಂಪ್ ಮೈಕ್ರೋಫೋನ್‍ನಲ್ಲಿ ರೆಕಾರ್ಡ್ ಆಗಿವೆ. ಈ ಹಿನ್ನೆಲೆ ನೀತಿ ಸಂಹಿತೆಯ ಹಂತ 1 ಉಲ್ಲಂಘನೆಗಳಿಗೆ, ಮ್ಯಾಚ್ ರೆಫ್ರಿ ದಂಡ ವಿಧಿಸಿದ್ದಾರೆ.
Advertisement
ಲಕ್ನೋ ಮತ್ತು ಆರ್‌ಸಿಬಿ ನಡುವಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್‍ಗಳಿಂದ ಜಯ ಸಾಧಿಸಿತು. ಇದನ್ನೂ ಓದಿ: ಪ್ಲೆ-ಆಫ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ಔಟ್?