ಮುಂಬೈ: ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಪರ ಕ್ವಿಂಟನ್ ಡಿ ಕಾಕ್ ಅಬ್ಬರದ ಆಟದ ನಡುವೆಯೂ ಗೆಲುವಿಗಾಗಿ ಪರದಾಡಿದ ಲಕ್ನೋ ಅಂತಿಮವಾಗಿ 2 ಎಸೆತ ಬಾಕಿ ಇರುವಂತೆ 6 ವಿಕೆಟ್ ಅಂತರದಿಂದ ಗೆದ್ದು ಬೀಗಿತು.
Advertisement
159 ರನ್‍ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಲಕ್ನೋ ತಂಡ ಉತ್ತಮ ಆರಂಭ ಪಡೆಯಿತು. ನಾಯಕ ಕೆ.ಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಮೊದಲ ವಿಕೆಟ್‍ಗೆ 73 ರನ್ (58 ಎಸೆತ)ಗಳ ಭರ್ಜರಿ ಆರಂಭ ನೀಡಿದರು. ರಾಹುಲ್ 24 ರನ್ (25 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಆದರೂ ಡಿ ಕಾಕ್ ಆರ್ಭಟ ಮಾತ್ರ ನಿಲ್ಲಿಸಲಿಲ್ಲ. ಆದರೆ ಡಿ ಕಾಕ್ ಅಬ್ಬರದ ಬ್ಯಾಟಿಂಗ್ 80 ರನ್ (52 ಎಸೆತ, 9 ಬೌಂಡರಿ, 2 ಸಿಕ್ಸ್) ಬಾರಿಸಿ ಔಟ್ ಆದರು. ಅಂತಿಮವಾಗಿ ಬದೋನಿ ಮತ್ತು ಕೃನಾಲ್ ಪಾಂಡ್ಯ 19.4 ಓವರ್‌ಗಳಲ್ಲಿ ಅಂತ್ಯಕ್ಕೆ 155 ರನ್ ಸಿಡಿಸಿ ಲಕ್ನೋಗೆ 6 ವಿಕೆಟ್‍ಗಳ ಜಯ ತಂದುಕೊಟ್ಟರು.
Advertisement
Advertisement
ಸಾಧಾರಣ ಮೊತ್ತ ಬೆನ್ನಟ್ಟಿದ ಲಕ್ನೋ ತಂಡ ಉತ್ತಮ ಆರಂಭ ಪಡೆಯಿತು. ನಾಯಕ ಕೆ.ಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಮೊದಲ ವಿಕೆಟ್‍ಗೆ 73 ರನ್ (58 ಎಸೆತ)ಗಳ ಭರ್ಜರಿ ಆರಂಭ ನೀಡಿದರು. ರಾಹುಲ್ 24 ರನ್ (25 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಆದರೂ ಡಿ ಕಾಕ್ ಆರ್ಭಟ ಮಾತ್ರ ನಿಲ್ಲಿಸಲಿಲ್ಲ.
Advertisement
ಈ ಮೊದಲು ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಎದುರಾಳಿ ತಂಡ ಡೆಲ್ಲಿಯನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿದರು. ಡೆಲ್ಲಿ ಪರ ಪೃಥ್ವಿ ಶಾ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್‍ಗೆ ಮುಂದಾದರು. ಅಲ್ಲದೆ ಮೊದಲ ವಿಕೆಟ್‍ಗೆ ಡೇವಿಡ್ ವಾರ್ನರ್ ಜೊತೆ 67 ರನ್ (45 ಎಸೆತ)ಗಳ ಜೊತೆಯಾಟವಾಡಿದರು. ಆದರೆ ಇದರಲ್ಲಿ ವಾರ್ನರ್ ಗಳಿಕೆ 4 ಮಾತ್ರ ಅಷ್ಟರಲ್ಲೇ ವಾರ್ನರ್ ಸುಸ್ತಾದರು. ಬಳಿಕ ಬಂದ ರೋವ್ಮನ್ ಪೋವೆಲ್ 3 ರನ್‍ಗಳಿಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.
ನಂತರ ರಿಷಭ್ ಪಂತ್ ಮತ್ತು ಸರ್ಫರಾಜ್ ಖಾನ್ 4ನೇ ವಿಕೆಟ್‍ಗೆ ಜೊತೆಯಾಗಿ ನಿಧಾನಗತಿಯಲ್ಲಿ ರನ್ ಸೇರಿಸಿದರು. ಕೊನೆಯ ಎಸೆತದ ವರೆಗೂ ಬ್ಯಾಟಿಂಗ್ ಮುಂದುವರಿಸಿದ ಈ ಜೋಡಿ 4ನೇ ವಿಕೆಟ್‍ಗೆ ಮುರಿಯದ 75 ರನ್ (57 ಎಸೆತ)ಗಳ ಜೊತೆಯಾಟವಾಡಿತು. ಪಂತ್ ಅಜೇಯ 39 ರನ್ (36 ಎಸೆತ, 3 ಬೌಂಡರಿ, 2 ಸಿಕ್ಸ್) ಮತ್ತು ಸರ್ಫರಾಜ್ ಖಾನ್ 36 ರನ್ (28 ಎಸೆತ, 3 ಬೌಂಡರಿ) ಸಿಡಿಸಿ ಮಿಂಚಿದರು. ಅಂತಿಮವಾಗಿ ಡೆಲ್ಲಿ ನಿಗದಿತ ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 149 ರನ್ ಪೇರಿಸಿತು.