Connect with us

Crime

ಕಾರ್ಖಾನೆಯಲ್ಲಿ ಅನಿಲ ಸೋರಿಕೆ- ಇಬ್ಬರು ಸಾವು, 15 ಮಂದಿ ಅಸ್ವಸ್ಥ

Published

on

– 15 ಮಂದಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

ಲಕ್ನೋ: ರಸಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿರುವ ಪರಿಣಾಮ ಇಬ್ಬರು ಅಧಿಕಾರಿಗಳು ಸಾವನ್ನಪ್ಪಿ, 15 ಜನ ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನಲ್ಲಿರು ಇಫ್ಕೋ ಕಾರ್ಖಾನೆಯಲ್ಲಿ ನಡೆದಿದೆ.

ಮೃತರನ್ನು ವಿ.ಪಿ ಸೀಂಗ್ ಹಾಗೂ ಅಭಯ್ ನಂದನ್ ಎಂದು ಗುರುತಿಸಲಾಗಿದೆ. ಭಾರೀ ಪ್ರಮಾಣದ ಅನಿಲ ಸೋರಿಕೆಯ ಈ ಅವಘಡಕ್ಕೆ ಕಾರಣವಾಗಿದೆ. ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೊ-ಆಪರೇಟಿವ್ ಲಿಮಿಟೆಡ್‍ನ ಫುಲ್ ಫುರ್ ಘಟಕದಲ್ಲಿ ಈ ದುರಂತ ಸಂಭವಿಸಿದೆ.

ಈ ಅವಘಡದಲ್ಲಿ ಅಸ್ವಸ್ಥಗೊಂಡ 15 ಮಂದಿಯನ್ನು ಸ್ಥಳೀಮಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆಯಲ್ಲಿ ಅನಿಲ ಸೋರುತ್ತಿರುವುದನ್ನು ನಿಯಂತ್ರಣಕ್ಕೆ ತರಲಾಗಿದೆ. ಎಲ್ಲಾ ಅಗತ್ಯ ಕ್ರಮವನ್ನು ಈಗಾಗಲೇ ಕೈಗೊಳ್ಳಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ದುರಂತ ಅವಘಡದ ಕುರಿತು ಕಳವಳ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಳೆದ ಐದಾರು ವರ್ಷಗಳಿಂದ ಈ ಘಟಕದಲ್ಲಿ ಹಲವಾರು ಬಾರಿ ಅನಿಲ ಸೋರಿಕೆಯಾಗಿದೆ. 2019ರಲ್ಲಿ ವಿಷ ಅನಿಲ ಸೋರಿಕೆಯಿಂದ ನಾಲ್ವರು ಕಾರ್ಮಿಕರು ಮೂರ್ಛೆ ತಪ್ಪಿದ್ದರು ಎಂದು ತಿಳಿದುಬಂದಿದೆ.

Click to comment

Leave a Reply

Your email address will not be published. Required fields are marked *

www.publictv.in