ಲಕ್ನೋ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಭಾರತ ಬಂದ್ ಘೋಷಣೆ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ತಾತ್ಕಾಲಿಕವಾಗಿ ಪಾನ್ ಮಸಾಲ ಉತ್ಪಾದನೆಗೆ ಬ್ರೇಕ್ ಹಾಕಿದೆ.
ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆ ಪಾನ್ ಗುಟ್ಕಾ ಮತ್ತು ತಂಬಾಕು ಉತ್ಪನ್ನಗಳ ಉತ್ಪಾದನೆ ಮಾಡದಂತೆ ಉತ್ಪಾದಕರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಸೂಚನೆ ನೀಡಿದೆ. ತಂಬಾಕು ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಲಾಲಾ ರಸದಲ್ಲಿರುವ ಸೋಂಕು ಮತ್ತೊಬ್ಬರಿಗೆ ಹರಡುಬಹುದು ಎನ್ನುವ ಕಾರಣಕ್ಕೆ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಗುಟ್ಕಾ, ಪಾನ್ ಮಸಾಲ ಮತ್ತು ಚೂಯಿಂಗ್ ತಂಬಾಕು ಬಳಕೆಯನ್ನು ತಕ್ಷಣ ನಿಷೇಧಿಸುವಂತೆ ಮುಖ್ಯಮಂತ್ರಿ ಹಿಂದೆ ಆದೇಶಿಸಿದರು. ಆದಾಗ್ಯೂ ಸರ್ಕಾರಿ ನೌಕರರು ತಂಬಾಕು ಮತ್ತು ಪಾನ್ ಮಸಾಲವನ್ನು ಅಗಿಯಲು ಪ್ರಾರಂಭಿಸಿದ್ದರು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ತಂಬಾಕು ನಿಷೇಧದ ಬದಲಿಗೆ ಅದರ ಉತ್ಪಾದನೆಗೆ ಬ್ರೇಕ್ ಹಾಕುವ ಪ್ರಯತ್ನ ಸಿಎಂ ಯೋಗಿ ಆದಿತ್ಯನಾಥ್ ಮಾಡಿದ್ದಾರೆ.