ಬೆಂಗಳೂರು: ಜನವರಿ 15 ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಅದೃಷ್ಟದ ದಿನವೇ? ಹೌದು ಎನ್ನುತ್ತಿದ್ದಾರೆ ಅಭಿಮಾನಿಗಳು. ಯಾಕೆಂದರೆ ಕಳೆದ ಮೂರು ವರ್ಷಗಳಿಂದ ಕೊಹ್ಲಿ ಈ ದಿನ ಶತಕ ಸಿಡಿಸಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.
ಹೌದು. 2017ರಲ್ಲಿ ಇಂಗ್ಲೆಂಡ್, 2018ರಲ್ಲಿ ದಕ್ಷಿಣ ಆಫ್ರಿಕಾ, ಈಗ ಆಸ್ಟ್ರೇಲಿಯಾ ವಿರುದ್ಧ ವರ್ಷದ ಕೊಹ್ಲಿ ಮೊದಲ ಶತಕ ಸಿಡಿಸಿ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ.
Advertisement
Advertisement
2017: ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 122 ರನ್(105 ಎಸೆತ, 8 ಬೌಂಡರಿ, 5 ಸಿಕ್ಸರ್) ಸಿಡಿಸಿದ್ದರು. ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ 7 ವಿಕೆಟ್ ನಷ್ಟಕ್ಕೆ 350 ರನ್ ಹೊಡೆದರೆ ಭಾರತ ಕೊಹ್ಲಿ ಮತ್ತು ಕೇದಾರ್ ಜಾಧವ್ ಶತಕದ(120 ರನ್, 76 ಎಸೆತ, 12 ಬೌಂಡರಿ, 4 ಸಿಕ್ಸರ್) ನೆರವಿನಿಂದ 48.1 ಓವರ್ ಗಳಲ್ಲಿ 356 ರನ್ ಹೊಡೆದು ಮೂರು ವಿಕೆಟ್ ಗಳ ಜಯವನ್ನು ಸಂಪಾದಿಸಿತ್ತು.
Advertisement
Advertisement
2018: ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚೂರಿಯನ್ ನಲ್ಲಿ ಜನವರಿ 13 ರಿಂದ 17ರ ವರೆಗೆ ಎರಡನೇ ಟೆಸ್ಟ್ ಪಂದ್ಯ ನಡೆದಿತ್ತು. ಮೊದಲು ಬ್ಯಾಟಿಂಗ್ ನಡೆಸಿದ್ದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 335 ರನ್ ಗಳಿಗೆ ಆಲೌಟ್ ಆಗಿತ್ತು. ಪಂದ್ಯದ ಎರಡನೇ ದಿನ 85 ರನ್ ಗಳಿಸಿದ್ದ ಕೊಹ್ಲಿ ಮೂರನೇ ದಿನ 153 ರನ್(217 ಎಸೆತ, 15 ಬೌಂಡರಿ) ಹೊಡೆದು ಕೊನೆಯವರಾಗಿ ಔಟಾಗಿದ್ದರು. ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ 135 ರನ್‍ಗಳಿಂದ ಗೆದ್ದುಕೊಂಡಿತ್ತು.
2019: ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ನಲ್ಲಿ ನಡೆದ ಎರಡನೇ ಏಕದಿನದ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 9 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿದರೆ ಭಾರತ 49.2 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 299 ರನ್ ಗಳಿಸಿತು. ವಿರಾಟ್ ಕೊಹ್ಲಿ 104 ರನ್(112 ಎಸೆತ, 5 ಬೌಂಡರಿ, 2 ಸಿಕ್ಸರ್) ಧೋನಿ ಔಟಾಗದೇ 55 ರನ್(54 ಎಸೆತ, 2 ಸಿಕ್ಸರ್) ಸಿಡಿಸಿ ತಂಡಕ್ಕೆ ಜಯವನ್ನು ತಂದುಕೊಟ್ಟರು. ಶತಕ ಸಿಡಿಸಿ ಗೆಲುವಲ್ಲಿ ಮುಖ್ಯ ಪಾತ್ರ ವಹಿಸಿದ್ದ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv