ನವದೆಹಲಿ: ಸಂಸತ್‍ನಲ್ಲಿ ಚರ್ಚೆ ನಡೆಯದಂತೆ ಅಡ್ಡಿಪಡಿಸುವುದು ನಂತರ ಹೊರಗೆ ಬಂದು ಸುಳ್ಳು ಹೇಳುವುದೇ ಕಾಂಗ್ರೆಸ್‍ನ ಸಿಂಗಲ್ ಪಾಯಿಂಟ್ ಅಜೆಂಡಾ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ರಾಜ್ಯಸಭೆ ಕಲಾಪದಲ್ಲಿ ಚರ್ಚೆಗೆ ಅವಕಾಶ ಕೊಟ್ಟಿಲ್ಲ ಎಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪಕ್ಷದ ರಾಜ್ಯಸಭೆ ಸದಸ್ಯ, ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್, ಆಹಾರ ಪದಾರ್ಥಗಳ ಮೇಲಿನ ಜಿಎಸ್‍ಟಿ ದರ ಹೆಚ್ಚಳ ಒಮ್ಮತದ ನಿರ್ಧಾರವಲ್ಲ ಅಂತ ಟ್ವಿಟ್ಟರ್‌ನಲ್ಲಿ ಟೀಕಿಸಿದರು.
Advertisement
Advertisement
ಈ ಬಗ್ಗೆ ಸುದೀರ್ಘ ಟ್ವೀಟ್ ಮಾಡಿರುವ ಜೈರಾಂ ರಮೇಶ್, ಜಿಎಸ್‍ಟಿ ಕೌನ್ಸಿಲ್‍ನಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ, ಇದು ಸರ್ವಸಮ್ಮತದ ನಿರ್ಧಾರವಲ್ಲ. ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರ ಜೊತೆ ಚರ್ಚೆ ನಡೆಸಿಲ್ಲ ಎಂದು ಆಪಾದಿಸಿದರು. ಇದನ್ನೂ ಓದಿ: Sena Vs Sena: ಉದ್ಧವ್ ಶಿಬಿರಕ್ಕೆ ತಕ್ಷಣದ ಪರಿಹಾರವಿಲ್ಲ, ಆಗಸ್ಟ್ 1 ರಂದು ಮುಂದಿನ ವಿಚಾರಣೆ: ಕೋರ್ಟ್
Advertisement
ಸರಣಿ ಟ್ವೀಟ್ ಮಾಡಿದ ಜೈರಾಮ್ ರಮೇಶ್‍ಗೆ ಟ್ವಿಟ್ಟರ್‌ನಲ್ಲೇ ತಿರುಗೇಟು ನೀಡಿದ ಅವರು, ಚರ್ಚೆಗೆ ನಾವು ಸಿದ್ಧ, ಸದನದಲ್ಲಿ ಯಾವುದೇ ವಿಷಯಗಳ ಚರ್ಚೆಗೆ ಸದನದ ನೀತಿ ನಿಯಮಾವಳಿಗಳಿವೆ. ಪ್ರತಿಪಕ್ಷಗಳು ಸಭಾಧ್ಯಕ್ಷರಿಗೆ ನೋಟಿಸ್ ಕೊಟ್ಟು ಚರ್ಚೆಗೆ ಅವಕಾಶ ಕೋರಬೇಕು. ಆ ಬಳಿಕ ಅದು ಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆಯಾಗಿ ಸಮಯ ನಿಗದಿಯಾಗಬೇಕು. ಆದರೆ ಕಾಂಗ್ರೆಸ್‍ಗೆ ಚರ್ಚಿಸುವುದು ಬೇಕಿಲ್ಲ, ಸದನದೊಳಗೆ ಕಲಾಪಕ್ಕೆ ಅಡ್ಡಿಪಡಿಸುವುದು. ಸದನದ ಹೊರಗೆ ಬಂದು ಸುಳ್ಳು ಹೇಳುವುದೇ ಕಾಂಗ್ರೆಸ್ ಕೆಲಸ ಎಂದು ಕಿಡಿಕಾರಿದರು.
Advertisement
However, the Opposition didn’t pay heed to the chair!
It’s highly 'parliamentary'? !!
During COVID when we dispensed Question Hour, they said Question Hour is the lifeline of the Parliament & now they don't allow it, this shows their double standards.
— Pralhad Joshi (@JoshiPralhad) July 20, 2022
ಪ್ರತಿಯೊಬ್ಬ ಸಂಸದರಿಗೂ ಪ್ರಶ್ನೋತ್ತರ ಅವಧಿ ಬಹಳ ಮುಖ್ಯ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನೋತ್ತರ ಅವಧಿಯನ್ನೇ ನಡೆಸಲು ಅವಕಾಶವಾಗದಂತೆ ಸದನದ ಕಲಾಪಕ್ಕೆ ಅಡ್ಡಿ ಮಾಡುತ್ತಿದೆ ಎಂದು ಜೋಶಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಟ್ವೀಟ್‍ನಲ್ಲಿ ಏನಿದೆ?
ಆಹಾರ ಪದಾರ್ಥಗಳ ಮೇಲಿನ ಜಿಎಸ್‍ಟಿ ದರಗಳ ಕುರಿತು ಮುಕ್ತ ಮನಸ್ಸಿನಿಂದ ಚರ್ಚಿಸಲು ನಾವು ತಯಾರಿದ್ದೇವೆ. ಆದರೆ ಕೇಂದ್ರ ವಿತ್ತ ಸಚಿವರು ಕೋವಿಡ್‍ಗೆ ತುತ್ತಾಗಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಂಡ ತಕ್ಷಣ ಮತ್ತು ಸಂಸದೀಯ ಕಲಾಪ ಸಲಹಾ ಸಮಿತಿ ನಿರ್ಧರಿಸಿದ ತಕ್ಷಣ ವಿತ್ತ ಸಚಿವರು ಉತ್ತರಿಸುತ್ತಾರೆ.
ಇಂದು ರಾಜ್ಯಸಭೆಯ ಗೌರವಾನ್ವಿತ ಸಭಾಧ್ಯಕ್ಷರು ಚರ್ಚೆಗೂ ಅವಕಾಶ ನೀಡೋದಾಗಿ ಹೇಳಿದರು. ಸದನದ ವಿಷಯ ಪಟ್ಟಿಯಂತೆ ಚರ್ಚೆಯ ಪ್ರಕ್ರಿಯೆಗಳು ಆರಂಭವಾಗಬೇಕು. ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರಿಗೆ ಸದನದ ಪದ್ದತಿ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ಉದ್ದೇಶ ಸಂಸತ್ತಿನ ಕಲಾಪ ಅಡ್ಡಿಪಡಿಸೋದು ಮಾತ್ರ, ಚರ್ಚೆ ನಡೆಸೋದಲ್ಲ. ವಾಸ್ತವವನ್ನು ಎದುರಿಸಲು ಸಾಧ್ಯವಾಗದ ಕಾರಣ ಸರ್ಕಾರದ ಉದ್ದೇಶದ ಬಗ್ಗೆ ಕಾಂಗ್ರೆಸ್ ಮುಖಂಡರು ಸುಳ್ಳು ಹೇಳುತ್ತಿದ್ದಾರೆ. ಕಲಾಪ ಅಡ್ಡಿಪಡಿಸುವುದು ಮತ್ತು ಪ್ರಪಂಚದ ಮುಂದೆ ಸುಳ್ಳು ಹೇಳುವುದು ಇದು ಕಾಂಗ್ರೆಸ್ ನೀತಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: 16 ಗೇಟ್‍ಗಳನ್ನು ರಿಪ್ಲೇಸ್ ಮಾಡಲಾಗಿದ್ದು, ಇವತ್ತಿಗೂ 61 ಗೇಟ್ ಬದಲಿಸಬೇಕಾಗಿದೆ: ಸಿಎಂ
ಪ್ರಪಂಚದ ಬೇರೆ-ಬೇರೆ ರಾಷ್ಟ್ರಗಳಲ್ಲಿ ಹಣದುಬ್ಬರ ಎಲ್ಲಿಗೆ ತಲುಪಿದೆ ಎನ್ನುವುದು ಕಾಂಗ್ರೆಸ್‍ಗೂ ಗೊತ್ತಿದೆ. ಭಾರತ ಹಣದುಬ್ಬರವನ್ನು ಕಂಟ್ರೋಲ್ ಮಾಡುವಲ್ಲಿ ದಿಟ್ಟ ಹೆಜ್ಜೆಗಳನ್ನ ತೆಗೆದುಕೊಂಡಿದೆ. ಹೀಗಾಗಿ ಸದನದಲ್ಲಿ ಕಾಂಗ್ರೆಸ್ ಚರ್ಚಿಸಲು ತಯಾರಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.