ಮಡಿಕೇರಿ: ಕೇಂದ್ರ ಬಿಜೆಪಿ ಸರ್ಕಾರವು (BJP Union Government) ಈ ಸಾಲಿನ ಬಜೆಟ್‌ನಲ್ಲೂ (Budget 2025) ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ಕೊಟ್ಟಿದೆ. ಈ ಮೂಲಕ ಯಾವುದೇ ಹೊಸ ಯೋಜನೆ ನೀಡದೇ ರಾಜ್ಯಕ್ಕೆ ಅನ್ಯಾಯ ಮಾಡುವುದನ್ನು ಮುಂದುವರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ (M Laxman) ಲೇವಡಿ ಮಾಡಿದ್ದಾರೆ.
Advertisement
ಖಾಲಿ ಚೊಂಬು ಹಾಗೂ ಮೂರುನಾಮ ಬಳಿದ ತೆಂಗಿನಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಬಾಣ ಪ್ರಯೋಗಿಸಿದರು. ಗೋವಿಂದ.. ಗೋವಿಂದ.. ಎಂದು ಕೂಗುತ್ತಲೇ ಖಾಲಿ ಚೊಂಬು, ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿದರು.
Advertisement
ಅಲ್ಲದೇ ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಹೆಚ್.ಡಿ ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನೂ ತರಲು ಸಾಧ್ಯವಾಗಿಲ್ಲ. ಇವರು ದಿನ ಬೆಳಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸುತ್ತಾ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿಲ್ಲ ಎಂದು ಟೀಕಿಸಿದರು.
Advertisement
Advertisement
ಕೇಂದ್ರ ಸರ್ಕಾರವು ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದ್ದರು. ಆದರೆ, ಅದಕ್ಕೆ ಸ್ಪಂದನೆ ದೊರೆತಿಲ್ಲ. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇದ್ದಾಗ ಬಜೆಟ್ ಗಾತ್ರ 14 ಲಕ್ಷ ಕೋಟಿ ಇತ್ತು. ಈ ಬಾರಿಯ ಬಜೆಟ್ ಗಾತ್ರ 50 ಲಕ್ಷ ಕೋಟಿ ದಾಟಿದೆ. 16 ಲಕ್ಷ ಕೋಟಿ ಸಾಲ ತೆಗೆದುಕೊಂಡಿದ್ದಾರೆ. 1947 ರಿಂದ 2014ರ ವರೆಗೆ ನಮ್ಮ ದೇಶ ಮಾಡಿದ್ದ ಸಾಲ 53 ಲಕ್ಷ ಕೋಟಿ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 10 ವರ್ಷಗಳಲ್ಲಿ ಸಾಲದ ಪ್ರಮಾಣ 205 ಲಕ್ಷ ಕೋಟಿಯಾಗಿದೆ ಎಂದು ದೂರಿದರು.
ದೇಶವನ್ನು ಅಭಿವೃದ್ಧಿ ಪಥದತ್ತ ನಡೆಸುವ ಬದಲಿಗೆ ಸಾಲದ ಕೂಪಕ್ಕೆ ತಳ್ಳಿರುವಂತಹ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ನರೇಗಾ ಅನುದಾನವನ್ನೂ ಕಡಿಮೆ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲೂ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇಡೀ ದೇಶದಲ್ಲಿ ಟ್ಯಾಕ್ಸ್ ಕಟ್ಟುವುದಲ್ಲಿ ಕರ್ನಾಟಕದ 2ನೇ ಸ್ಥಾನದಲ್ಲಿ ಇದೆ. ಆದರೆ ನಮ್ಮ ಹಣವನ್ನು ನಮಗೆ ಕೊಡದೇ ನಮ್ಮಿಂದ ಸಂಗ್ರಹ ಮಾಡಿರುವ ಹಣವನ್ನು ಬೇರೆ ಬೇರೆ ರಾಜ್ಯಗಳಿಗೆ ಕೊಡುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ರು.
ಇದೇ ವೇಳೆ ಕರ್ನಾಟಕದಲ್ಲಿ ಜಾತಿ ಜನಗಣತಿಯ ವರದಿ ಸದ್ಯದಲ್ಲೇ ಬಿಡುಗಡೆಯಾಗಲ್ಲಿದೆ ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ರೀತಿಯಲ್ಲಿ ಇದಕ್ಕೆ ವಿರೋಧ ವ್ಯಕ್ತ ಪಡಿಸುತ್ತಿಲ್ಲ ಎಂದು ತಿಳಿಸಿದ್ರು.