ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karnataka Film Chamber Of Commerce) ನಡೆದ ಚುನಾವಣೆಯಲ್ಲಿ ಮತ್ತೆ ಸಾರಾ ಗೋವಿಂದು ಬಣಕ್ಕೆ ಜಯವಾಗಿದೆ. ಈ ಬಾರಿ ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಎಂ.ನರಸಿಂಹಲು (M.Narasimhalu) ಆಯ್ಕೆಯಾಗಿದ್ದಾರೆ.
ಈ ಬಾರಿ ಅಧ್ಯಕ್ಷ ಸ್ಥಾನ ಪ್ರದರ್ಶಕರ ವಲಯಕ್ಕೆ ಮೀಸಲಾಗಿತ್ತು. ಎಂ.ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ಆರ್.ಸುಂದರ್ ರಾಜು ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ. ಇದನ್ನೂ ಓದಿ: ಅಂತರ್ ರಾಜ್ಯ ವರ್ತಕರ ಹಾವಳಿ | ಸ್ಥಳೀಯ ವ್ಯಾಪಾರಿಗಳ ಆಕ್ರೋಶ – ಡಿ.16ಕ್ಕೆ ಬೀಳಗಿ ಬಂದ್‌ಗೆ ಕರೆ
Advertisement
Advertisement
ಉಪಾಧ್ಯಕ್ಷ ಸ್ಥಾನಕ್ಕೆ ಸಫಾಯರ್ ವೆಂಕಟೇಶ್ ಆಯ್ಕೆಯಾಗಿದ್ದಾರೆ. ವಿತರಕ ಮತ್ತು ಪ್ರದರ್ಶಕರ ವಲಯದಿಂದ ಉಪಾಧ್ಯಕ್ಷರಾಗಿ ಶಿಲ್ಪಾ ಶ್ರೀನಿವಾಸ್, ಕಾರ್ಯದರ್ಶಿಯಾಗಿ ಎಂ.ಎನ್.ಕುಮಾರ್, ಪ್ರದರ್ಶಕರ ಉಪಾಧ್ಯಕ್ಷ – ಕೆ.ರಂಗಪ್ಪ, ಕಾರ್ಯದರ್ಶಿ ಕುಶಾಲ್, ಖಜಾಂಚಿ – ಮಹದೇವ್ ಚುನಾಯಿತರಾಗಿದ್ದಾರೆ.
Advertisement
Advertisement
ನಿರ್ಮಾಪಕರ ವಲಯದಿಂದ ಗೌರವ ಕಾರ್ಯದರ್ಶಿ ಡಿ.ಕೆ.ರಾಮಕೃಷ್ಣ, ಗೌರವ ಕಾರ್ಯದರ್ಶಿ ಎಂ.ಎನ್.ಕುಮಾರ್, ಪ್ರದರ್ಶಕರಾಗಿ ಎಂ.ಸಿ.ಕುಶಾಲ್ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ನನ್ನ ಸಿನಿಮಾ ರಿಲೀಸ್ ಟೈಮಲ್ಲೇ ಕಟೌಟ್‍ನಿಂದ ಬಿದ್ದು ದುರಂತ ಆಗಿತ್ತು: ಸುದೀಪ್