ದಾವಣಗೆರೆ: ಯತ್ನಾಳ್ ಬಗ್ಗೆ ನಾನು ಮಾತನಾಡುವುದಕ್ಕೂ ಅಸಹ್ಯ ಎನಿಸುತ್ತೆ. ಒಂದು ಹುಚ್ಚು ನಾಯಿ ಇದ್ದಂತೆ ಎಂದು ಸ್ವಪಕ್ಷದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧವೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (Renukacharya) ವಾಗ್ದಾಳಿ ನಡೆಸಿದರು.
ಸರ್ವಜ್ಞರ ವಚನ ಹೇಳುವ ಮೂಲಕ ಯತ್ನಾಳ್ (Basanagouda Patil Yatnal) ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತೆ. ಅದಕ್ಕೆ ಆನೆಗೆ ಇರುವ ಗೌರವ ಕಡಿಮೆಯಾಗುತ್ತಾ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದು ಗರಂ ಆದರು. ಇದನ್ನೂ ಓದಿ: ಕಾಫಿನಾಡ ದತ್ತಜಯಂತಿಗೆ ಅಧಿಕೃತ ಚಾಲನೆ; ಸಿ.ಟಿ.ರವಿ ಮಾಲಾಧಾರಣೆ – ಜಿಲ್ಲಾದ್ಯಂತ ಹೈ ಅಲರ್ಟ್
Advertisement
Advertisement
ವಿಜಯೇಂದ್ರ, ಯಡಿಯೂರಪ್ಪ ಅವರನ್ನು ಟೀಕೆ ಮಾಡಿದ್ರೆ, ಮೋದಿ ಮತ್ತು ಕೇಂದ್ರ ವರಿಷ್ಠರನ್ನು ಟೀಕೆ ಮಾಡಿದಂತೆ. ಯಡಿಯೂರಪ್ಪ ಆನೆ ಇದ್ದಂತೆ, ಅವರ ಬಗ್ಗೆ ಮಾತನಾಡುವವರು ಹುಚ್ಚು ನಾಯಿ. ಹುಚ್ಚು ನಾಯಿ ಬಗ್ಗೆ ಮಾತನಾಡುವುದು ಕೂಡ ವೇಸ್ಟ್. ಆ ಹುಚ್ಚು ನಾಯಿ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೇನೆ ಎಂದು ಟೀಕಾಪ್ರಹಾರ ನಡೆಸಿದರು.
Advertisement
ಸೋಮಣ್ಣ ಸೋಲಿಗೆ ವಿಜಯೇಂದ್ರ ಕಾರಣ ಎಂದು ಹೇಳುತ್ತಾರೆ. ಸೋಮಣ್ಣ ಸೋಲಲು ವಿಜಯೇಂದ್ರ ಕಾರಣನಾ? ಶಿಕಾರಿಪುರದಲ್ಲಿ ಅವರನ್ನು ಸೋಲಿಸಲು ಕುತಂತ್ರ ಮಾಡಿದವರು ಇಂಥವರೇ. ಗೆದ್ದರೆ ಮಹಾನ್ ನಾಯಕನಾಗುತ್ತಾನೆ ಎಂದು ಸೋಲಿಸಲು ಕುತಂತ್ರ ಮಾಡಿದ್ರು. 2018 ರಲ್ಲಿ ಸಚಿವ ಸ್ಥಾನ ಕೊಡಲಿಲ್ಲ ಎಂದು ಈ ರೀತಿ ಮಾಡ್ತಾ ಇದ್ದಾರೆ. ಯಾವ ಸೀನಿಯಾರಿಟಿ ಇದೆ? ಬೊಗಳೋದೆ ಸೀನಿಯಾರಿಟಿನಾ? ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಬೊಗಳೋಕೆ ಬಿಟ್ಟವರು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ
Advertisement
ಯಾರು ಅವರ ವಿರುದ್ಧ ಬೊಗಳು ಅಂತಾ ಹೇಳಿದ್ದಾರೆ. ಇವರಿಗೆ ಯಾರು ಈ ರೀತಿ ಬೊಗಳು ಅಂತಾ ಹೇಳಿಕೊಟ್ಟಿದ್ದಾರೆ ಅಂತ ಹೇಳಲಿ ಎಂದು ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರಿಗೆ ಟಿಪ್ಪು, ಬಾಬರ್, ಔರಂಗಜೇಬ್, ಘಜ್ನಿ ಮಹಮ್ಮದ್ ಹೆಸರು ಮಾತ್ರ ನೆನಪಿಗೆ ಬರುತ್ತೆ. ಅವರ ಶಾಸಕರು, ಸಚಿವರು ಟಿಪ್ಪುವಿನ ಹೆಸರು ಜಪ ಮಾಡ್ತಾರೆ. ನಿಮ್ಮ ಮನೆಗಳಿಗೆ ಟಿಪ್ಪು ನಿಲಯ, ಘಜ್ನಿ ಔರಂಗಜೇಬನ ನಿಲಯ ಎಂದು ಇಟ್ಟುಕೊಳ್ಳಿ. ಆದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.
ವೋಟ್‌ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ಜಪ ಮಾಡ್ತಾರೆ. ಕುಕ್ಕರ್ ಬ್ಲಾಸ್ಟ್ ಆದಾಗ ಡಿಕೆಶಿ ನಮ್ಮ ಸಹೋದರರು ಅಂತ ಹೇಳ್ತಾರೆ. ಮೈಸೂರು ಮಹರಾಜ, ಸುತ್ತೂರು ಶ್ರೀಗಳು ಸೇರಿದಂತೆ ದಾರ್ಶನಿಕರ ಹೆಸರು ಇಡಿ. ಆದರೆ ವೋಟ್‌ಬ್ಯಾಂಕ್‌ಗಾಗಿ ಈ ರೀತಿ ಮತಾಂಧರ ಹೆಸರು ಜಪ ಮಾಡ್ತಾರೆ. ನಿಮಗೆ ರೈತರ ಬಗ್ಗೆ ಕಾಳಜಿ ಇದ್ದಾರೆ 25 ಸಾವಿರ ರೂಪಾಯಿ ಪರಿಹಾರ ಕೊಡಿ. ನೀವು ಘೋಷಣೆ ಮಾಡಿದ ಭರವಸೆಗಳು ಭರವಸೆಯಾಗಿಯೇ ಉಳಿದಿವೆ. ಈ ಸರ್ಕಾರ ಬಂದಾಗಿನಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಬಿಡುಗಡೆಯಾಗಿಲ್ಲ. ರೈತರು, ನೌಕರರಿಗೆ ನೀವು ನೀಡಿದ ಭರವಸೆ ಈಡೇರಿಲ್ಲ. ಅದ್ದರಿಂದ ನಾವು ಹೊನ್ನಾಳಿಯಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಪ್ರಿನ್ಸಿಪಾಲ್, ವಾರ್ಡನ್, ಡಿ-ಗ್ರೂಪ್ ನೌಕರರ ಅಮಾನತಿಗೆ ಸೂಚನೆ
ಕಾಂಗ್ರೆಸ್ ಔತಣಕೂಟಕ್ಕೆ ಬಿಜೆಪಿ ಶಾಸಕರು ಹೋದ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆಶಿ ಆಹ್ವಾನ ಮಾಡಿದ್ದಕ್ಕೆ ಔತಣಕೂಟಕ್ಕೆ ಮಾತ್ರ ಹೋಗಿದ್ದಾರೆ. ಔತಣ ಕೂಟಕ್ಕೆ ಹೋಗಿದ್ದಾರೆ ಎಂದರೆ ಪಕ್ಷ ವಿರೋಧಿ ಚಟುವಟಿ ಮಾಡುತ್ತಾರೆ ಎಂದಾ? ಅವರೇ ಹೇಳಿದ್ದಾರಲ್ಲ ಆಹ್ವಾನವಿತ್ತು. ಅದ್ದರಿಂದ ಹೋಗಿ ಬಂದ್ವಿ ಎಂದರಲ್ಲ ಎಂದು ತಿಳಿಸಿದರು.