ಬೀದರ್: ಕೃಷಿಗಾಗಿ ಸತತ 5 ತಿಂಗಳಿನಿಂದ ಏಕಾಂಗಿಯಾಗಿ ಬಾವಿ ತೋಡಿದ ಎಂಟೆಕ್ ಪದವೀಧರರೊಬ್ಬರು ನೀರು ತಂದು ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ.
ಜಿಲ್ಲೆಯ ಔರಾದ್ ತಾಲೂಕಿನ ಸೂರ್ಯಕಾಂತ್ ಪ್ರಭು ಎಂಟೆಕ್ ಓದಿದ್ದಾರೆ. 25/30 ವಿಸ್ತೀರ್ಣದ 14 ಅಡಿ ಬಾವಿಯನ್ನು ಬಬ್ಬರೇ ತೋಡಿ ನೀರು ತೆಗೆದಿದ್ದಾರೆ. ಎಂಟೆಕ್ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೂರ್ಯಕಾಂತ್ ಲಾಕ್‍ಡೌನ್ ವೇಳೆ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲದಿಂದ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?
Advertisement
Advertisement
ಮೊದ ಮೊದಲು ಈ ಪದವೀಧರನ ಈ ಸಾಹಸ ನೋಡಿ ಗ್ರಾಮಸ್ಥರು ಹುಚ್ಚು ಎನ್ನುತ್ತಿದ್ದರು. ಈಗ ಅದೇ ಗ್ರಾಮಸ್ಥರು ಅವರ ಬಾವಿಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬಾವಿ ನೀರಿನಿಂದ 400 ಗಡಿಗಳನ್ನು ಬೆಳಸಿರುವ ಸೂರ್ಯಕಾಂತ್ ಛಲಕ್ಕೆ ಜಿಲ್ಲೆಯ ಜನರು ಜೈಕಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Advertisement
ತಮ್ಮ ಸಾಧನೆ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸೂರ್ಯಕಾಂತ್‍ರವರು, ಮೊದಲು ಎಲ್ಲರು ಹುಚ್ಚ ಎಂದು ಕರೆಯುತ್ತಿದ್ದರು. ಈಗ ಅದೇ ಗ್ರಾಮಸ್ಥರು ಇಲ್ಲಿಂದಲೇ ನೀರು ತೆಗೆದುಕೊಂಡು ಹೋಗುತ್ತಿದ್ದು ನನಗೆ ಬಹಳ ಖುಷಿಯಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.