ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು ‘ಮಾಣಿಕ್ಯ’ ನಟಿ ಎಂಗೇಜ್‌ಮೆಂಟ್

Public TV
1 Min Read
Varalakshmi Sarathkumar

ನ್ನಡದ ‘ಮಾಣಿಕ್ಯ’ (Maanikya) ಚಿತ್ರ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalakshmi Sarathkumar) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆಗಿದ್ದಾರೆ. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

Varalakshmi Sarathkumar 1

ನಟಿ ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ (Nicholai Sachdev) ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮಾರ್ಚ್ 1ರಂದು ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

Varalakshmi Sarathkumar 2

ಈ ವರ್ಷದ ಅಂತ್ಯದಲ್ಲಿ ವರಲಕ್ಷ್ಮಿ ಮದುವೆ ಸಮಾರಂಭ ನಡೆಯಲಿದೆ. ತಮಿಳಿನ ಹಿರಿಯ ನಟ ಶರತ್ ಕುಮಾರ್ ಅವರ ಪುತ್ರಿಯಾಗಿದ್ದು, ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸದ್ಯ ಧನುಷ್ ನಟನೆಯ ‘ರಾಯನ್’ ಚಿತ್ರದಲ್ಲಿ ವರಲಕ್ಷ್ಮಿ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಇದನ್ನೂ ಓದಿ:ಕರಿಮಣಿ ಮಾಲೀಕನನ್ನು ಪರಿಚಯಿಸಿದ ದೀಪಿಕಾ ದಾಸ್

ಸುದೀಪ್ (Sudeep) ಜೊತೆ ‘ಮಾಣಿಕ್ಯ’ ಮಾತ್ರವಲ್ಲ, ರನ್ನ ಸಿನಿಮಾದಲ್ಲೂ ವರಲಕ್ಷ್ಮಿ ಶರತ್‌ಕುಮಾರ್ ಕಾಣಿಸಿಕೊಂಡಿದ್ದಾರೆ. ಇವಿಷ್ಟು ಮಾತ್ರವಲ್ಲದೆ ಕನ್ನಡದ ವಿಸ್ಮಯ, ರಣಂ ಚಿತ್ರದಲ್ಲಿ ನಟಿಸಿದ್ದಾರೆ.

Share This Article