ಬೆಂಗಳೂರು: ಎಫ್‍ಐಆರ್ ದಾಖಲಾದ ಬಳಿಕ ನಟ ದುನಿಯ ವಿಜಯ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಾಪತ್ತೆಯಾಗಿದ್ದಾರೆ.
ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್ ಮೇಲೆ ಎಫ್‍ಐಆರ್ ದಾಖಲಾಗಿತ್ತು.
Advertisement
ಐಪಿಸಿ ಸೆಕ್ಷನ್ 353(ಪೊಲೀಸರ ಕರ್ತವ್ಯಕ್ಕೆ ಅಡ್ಡಿ), ಸೆಕ್ಷನ್ 225(ಆರೋಪಿಯ ಬಂಧನಕ್ಕೆ ಅಡ್ಡಿ) ಪ್ರಕರಣಗಳು ಜಾಮೀನು ಸಿಗುವ ಕೇಸ್ ಆಗಿದ್ದರೂ ದುನಿಯಾ ವಿಜಯ್ ಪರಾರಿಯಾಗಿದ್ದಾರೆ. ಈಗ ವಿಜಯ್ ಪರಾರಿಯಾಗಿರುವ ಕಾರಣ ಪ್ರಕರಣ ಮತ್ತಷ್ಟು ಜಟಿಲವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಚಿತ್ರನಟ ದುನಿಯಾ ವಿಜಯ್ ಮೇಲೆ ಎಫ್‍ಐಆರ್
Advertisement
ಈ ಪ್ರಕರಣ ಸಂಬಂಧ ಠಾಣೆಗೆ ಹಾಜರಾಗಿದ್ದರೆ ಕೋರ್ಟ್ ನಲ್ಲಿ ಜಾಮೀನು ಸಿಗುತಿತ್ತು. ಈಗ ಪರಾರಿಯಾದ ಕಾರಣ ಚೆನ್ನಮ್ಮನ ಕೆರೆ ಅಚ್ಚು ಕಟ್ಟು ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಸದ್ಯಕ್ಕೆ ದುನಿಯಾ ವಿಜಯ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ. ಸಿ.ಕೆ ಅಚ್ಚುಕಟ್ಟು ಪೊಲೀಸರು ವಿಜಯ್ ಅವರ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.
Advertisement
ಪೊಲೀಸರು ದುನಿಯಾ ವಿಜಯ್ ಮೊಬೈಲ್ ಲೊಕೇಷನ್ ಆಧರಿಸಿ ಹುಡುಕಾಟ ನಡೆಸುತ್ತಿದ್ದು, ಇತ್ತ ಸುಂದರ್ ಗೌಡ ಮೊಬೈಲ್ ಕೂಡ ಮುಂಜಾನೆಯಿಂದ ಸ್ವಿಚ್ ಆಫ್ ಆಗಿ ಬರುತ್ತಿದೆ. ಗಿರಿನಗರ ಹಾಗೂ ಸಿ.ಕೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಎರಡು ಮನೆಗಳಲ್ಲಿಯೂ ದುನಿಯಾ ವಿಜಿ ಪತ್ತೆಯಾಗಿಲ್ಲ..
Advertisement
ಮಾಸ್ತಿಗುಡಿ ಚಿತ್ರಣದ ಸಾವು ಪ್ರಕರಣ ಸಂಬಂಧ ನಿರ್ದೇಶಕನ ಮೇಲೆ ರಾಮನಗರ ಜೆಎಂಎಫ್ ಸಿ ಕೋರ್ಟ್ ನಿಂದ ವಾರೆಂಟ್ ಜಾರಿಯಾಗಿತ್ತು. ಕೋರ್ಟ್ ತೀರ್ಪಿನಂತೆ ತಾವರೆಕೆರೆ ಪೊಲೀಸರು ವಾರೆಂಟ್ ಹಿಡಿದು ನಿರ್ದೇಶಕ ಸುಂದರ್ ಪಿ ಗೌಡ ಅವರನ್ನು ಬಂಧಿಸಲು ಬುಧವಾರ ತಡರಾತ್ರಿ ಬಂದಿದ್ದರು. ಸುಂದರ್ ಮನೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತು. ಈ ವೇಳೆ ದುನಿಯಾ ವಿಜಯ್ ಎಂಟ್ರಿ ಕೊಟ್ಟು ಸುಂದರ್ ಬಂಧಿಸದಂತೆ ಪೊಲೀಸರನ್ನ ತಡೆದಿದ್ದರು. ಇದೇ ಸಂದರ್ಭದಲ್ಲಿ ಸುಂದರ್ ಗೌಡ ಹಿಂಬಾಗಿಲಿನಿಂದ ಪರಾರಿಯಾಗಿದ್ದರು.