ಬೆಂಗಳೂರು: ಮುಡಾ ಪ್ರಕರಣಕ್ಕೆ (MUDA Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪತ್ನಿ ಪಾರ್ವತಿ (Parvathi) ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ (Byrathi Suresh) ಅವರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಇಡಿ ದಾಖಲಿಸಿದ ಇಸಿಐಆರ್ ಅನ್ನು ರದ್ದುಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೆ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಚಾರಣೆ ನಡೆಸಿದ್ದ ನ್ಯಾ. ನಾಗಪ್ರಸನ್ನ ಪೀಠದಿಂದ ಈ ಮಹತ್ವದ ಆದೇಶ ಪ್ರಕಟವಾಗಿದೆ.
ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದನ್ನು ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಪಾರ್ವತಿ ಪರ ಹಿರಿಯ ವಕೀಲ ಸಂದೇಶ ಚೌಟ ವಾದಿಸಿದ್ದರೆ ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.