ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್
ಪುತ್ರ ಪ್ರಶಾಂತ್ ಮಾಡಾಳ್ ಹಣದೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಅದಾನಿ ಕಂಪನಿ ವಿರುದ್ಧ JPC ತನಿಖೆಗೆ ಆಗ್ರಹ – ಸಂಸತ್‌ನಲ್ಲಿ ಕಪ್ಪು ಬಟ್ಟೆ ಧರಿಸಿ ವಿಪಕ್ಷಗಳ ಪ್ರತಿಭಟನೆ