ಬೆಂಗಳೂರು: ಮದ್ದೂರಿನಲ್ಲಿ (Maddur) ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆ ಆಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸರು ಬೇಡ ಅಂದರೂ ಗುಂಪು ಕಟ್ಟಿಕೊಂಡು ಹೋಗಿದ್ದಾರೆ. ಇಲ್ಲಿ ತನಕ 21 ಜನರ ಬಂಧನ ಆಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಆಗಿದೆ. ಹಿಂದೂಗಳು, ಮುಸ್ಲಿಂ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಲಿದೆ. ಪೊಲೀಸರು ನನ್ನ ಪ್ರಕಾರ ತಪ್ಪು ಮಾಡಿಲ್ಲ, ಕಾನೂನು ಪ್ರಕಾರ ನಡೆದುಕೊಂಡಿದ್ದಾರೆ ಎಂದು ಲಾಠಿ ಚಾರ್ಜ್ ಸಮರ್ಥಿಸಿಕೊಂಡರು. ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ ಸ್ಥಳಕ್ಕೆ ಹೋಗುತ್ತಾರೆ, ವರದಿ ಕೊಡ್ತಾರೆ ನೋಡೋಣ ಎಂದರು. ಇದನ್ನೂ ಓದಿ: ಸರ್ಕಾರದ ಓಲೈಕೆ ರಾಜಕಾರಣವೇ ಮದ್ದೂರು ಗಲಭೆಗೆ ಕಾರಣ: ಬಸವರಾಜ ಬೊಮ್ಮಾಯಿ ಕಿಡಿ
ಬಿಜೆಪಿ ಅವರು ಜನರ ನೆಮ್ಮದಿ ಹಾಳು ಮಾಡುತ್ತಿದ್ದಾರೆ, ಕೋಮುವಾದದಿಂದ ಪಕ್ಷ ಕಟ್ಟಬಾರದು. ಬಿಜೆಪಿ, ಜೆಡಿಎಸ್ ಪ್ರಚೋದನೆ ಮಾಡುತ್ತಿದೆ ಎಂದು ಹೇಳಿದರು. ಹೀಗೆ ಮುಂದುವರಿದ್ರೆ ಸರ್ಕಾರ ಪತನ ಆಗಲಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಟಕ್ಕರ್ ಕೊಟ್ಟ ಸಿಎಂ, ಪಾಪ ಕುಮಾರಸ್ವಾಮಿ ಪಕ್ಷ ಪತನ ಆಗ್ತಿದೆ, ಪತನ ಆಗದಂತೆ ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ