ಬೆಂಗಳೂರು: ಲೋಕಸಭೆ ಚುನಾವಣೆಗೆ ಶಿವಮೊಗ್ಗಕ್ಕೆ ದೋಸ್ತಿಗಳ ಅಭ್ಯರ್ಥಿ ಫಿಕ್ಸ್ ಆಗಿದ್ದು, ಮಧು ಬಂಗಾರಪ್ಪರನ್ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಇಂದು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ ದೇವೇಗೌಡರು ಅಭ್ಯರ್ಥಿಯನ್ನು ಘೋಷಿಸಿ, ಇಂದು ಮೊದಲ ಹಂತದ ಸಭೆ ನಡೆದಿದೆ. 12 ಸ್ಥಾನ ನಾವು ಕೇಳಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡನೇ ಹಂತದ ಸಭೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.
ಇದರ ನಡುವೆಯೇ ಲೋಕಸಭೆ ಸೀಟು ಹಂಚಿಕೆ ಸಂಬಂಧ ಬೆಂಗಳೂರಲ್ಲಿಂದು ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯಿತು. ಇನ್ನು ಎರಡ್ಮೂರು ದಿನಗಳಲ್ಲಿ ಸಮನ್ವಯ ಸಮಿತಿ ಸಭೆ ನಡೆಸಿ ಅಲ್ಲಿ ಕ್ಷೇತ್ರ ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಇಂದಿನ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, ಸಚಿವ ರೇವಣ್ಣ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಪರಮೇಶ್ವರ್ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಸೀಟು ಹಂಚಿಕೆ ಸಂಬಂಧ ಸಚಿವ ಕೃಷ್ಣ ಬೈರೇಗೌಡರ ನಿವಾಸದಲ್ಲಿ ಕಾಂಗ್ರೆಸ್ ಮಂತ್ರಿಗಳ ಉಪಹಾರ ಕೂಟ ನಡೆಯಿತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv