ಬೆಂಗಳೂರು: ಹಿಜಬ್ (Hijab) ವಿಚಾರದಲ್ಲಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಕಾನೂನಿನ ಅಡಿಯಲ್ಲೇ ಕ್ರಮ ತಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ಬೆಂಗಳೂರಿನಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಿಜಬ್ ನಿಷೇಧ ವಾಪಸ್ ಪಡೆಯುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಹಿಜಬ್ ವಿಚಾರದಲ್ಲಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದು, ಕಾನೂನು ಏನು ಹೇಳುತ್ತದೆ ಎಂಬುದನ್ನ ನೋಡಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಈ ಹೇಳಿಕೆಯಿಂದ ಗೊಂದಲ ಆಗಿದ್ದರೆ, ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದು ಚರ್ಚೆ ಮಾಡಿ ನಿರ್ದೇಶನ ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯ ಘಟಕಕ್ಕೆ 10 ಉಪಾಧ್ಯಕ್ಷರು; ಪದಾಧಿಕಾರಿಗಳ ತಂಡ ಪುನಾರಚನೆ – ಯಾರಿಗೆ ಯಾವ ಸ್ಥಾನ?
Advertisement
Advertisement
ಇದು ಸೂಕ್ಷ್ಮವಾದ ವಿಚಾರವಾಗಿದ್ದು, ಎಲ್ಲಾ ಸಾಧಕ-ಬಾಧಕಗಳ ಬಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸುತ್ತೇವೆ. ನಾವು ಏನೇ ತೀರ್ಮಾನ ಮಾಡಿದರೂ ಅದು ಕಾನೂನು ತಜ್ಞರ ಸಲಹೆ ಪಡೆದು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
Advertisement
Advertisement
ಬಿಜೆಪಿ (BJP) ನಾಯಕರು ಇಂತಹ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಿ ಜನ ಅವರನ್ನು ತಿರಸ್ಕರಿಸಿದ್ದಾರೆ. ಈಗಾಲಾದರು ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಅವರು ಬಿಡಬೇಕು ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಹಿಜಬ್ ಅಸ್ತ್ರ, ಕಾಂಗ್ರೆಸ್‍ನಲ್ಲಿ ಸ್ಟ್ಯಾಂಡ್ ಗೊಂದಲ