ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಲಿ, ಆಪರೇಷನ್ ಹಸ್ತದ ವಿಚಾರವಾಗಲಿ ಯಾವ ಪ್ರತಿಕ್ರಿಯೆಯನ್ನು ಕೊಡುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಲು ಹೇಳಿದ್ದಾರೆ. ಅದಕ್ಕೆ ನಾನು ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ದಾವಣಗೆರೆಯ (Davanagere) ಹುಚ್ಚಂಗಿಪುರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಿಎಂ ಬದಲಾವಣೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ನೀವು ಪ್ರಶ್ನೆ ಕೇಳಬೇಡಿ ಬಾಯಿಮುಚ್ಚಿಕೊಂಡು ಕುಳಿತುಕೊಳ್ಳಿ ಎಂದು ನಾನು ಹೇಳುವುದಿಲ್ಲ. ನೀವು ಕೇಳಿ, ನಾನು ಮಾತ್ರ ಆ ಕುರಿತು ಪ್ರತಿಕ್ರಿಯೆ ನೀಡಲಾರೆ, ಬಾಯಿ ಮುಚ್ಚಿಕೊಂಡು ಇರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಎ++ ಗ್ರೇಡ್ ನೀಡಲು ಲಂಚ ಆರೋಪ – ಬಂಧನ ಬೆನ್ನಲ್ಲೇ ದಾವಣಗೆರೆ ವಿವಿ ಪ್ರಾಧ್ಯಾಪಕಿ ಅಮಾನತು
ಮುಡಾ ಪ್ರಕರಣ (Davanagere) ತನಿಖೆಯನ್ನು ಸಿಬಿಐಗೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ, ಕೋರ್ಟ್ ತೀರ್ಪು ಕೊಟ್ಟ ಮೇಲೆ ಮುಗಿತಲ್ಲ. ಮತ್ತೆ ಇನ್ನೇನೂ ಬೇಕು? ಎಂದು ಮಾಧ್ಯಮದವರ ಪ್ರಶ್ನೆಗೆ ಮರು ಪ್ರಶ್ನೆ ಮಾಡಿದರು. ಹೈಕೋರ್ಟ್ ತೀರ್ಪು ಕೊಟ್ಟಿದೆ. ದೇಶದಲ್ಲಿ ಯಾವುದೇ ಕೋರ್ಟ್‍ಗೆ ಹೋಗಲು ಯಾರಿಗಾದರೂ ಅವಕಾಶ ಇದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರ ಮೇಲೆ ಅನಾವಶ್ಯಕವಾಗಿ ಪ್ರಕರಣ ದಾಖಲಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಿಬಿಐಗೆ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: POCSO Case: ಬಂಧನ ಭೀತಿಯಿಂದ ಬಚಾವ್, ಬಿಎಸ್‌ವೈಗೆ ಜಾಮೀನು- ಕೋರ್ಟ್ ಹೇಳಿದ್ದೇನು?