ಬೆಂಗಳೂರು: ಕರ್ನಾಟಕದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವಿನ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸಬೇಕೆಂದು ರಾಜ್ಯ ಸರ್ಕಾರದಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಹೆಚ್1 ಎನ್1 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದ ಮಧುಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ ಎಂದು ಹೇಳಲಾಗಿದೆ.
ಸಿಂಗಂ ಸಾವಿನ ಬಗ್ಗೆ ಅನುಮಾನವ್ಯಾಕೆ?
ಪ್ರಮುಖ ಪ್ರಕರಣಗಳಲ್ಲಿ ಮಧುಕರ್ ಶೆಟ್ಟಿ ಸಾಕ್ಷ್ಯವಾಗಿದ್ದರು. ಖಡಕ್ ಅಧಿಕಾರಿಯಾಗಿದ್ದರಿಂದ ಹಲವು ರಾಜಕಾರಣಿಗಳ ವಿರೋಧವನ್ನು ಕಟ್ಟಿಕೊಂಡಿದ್ದರು. ಸರ್ಕಾರದ ವರ್ತನೆಯಿಂದ ಸಾಕಷ್ಟು ಬೇಸರಗೊಂಡಿದ್ದರು ಎಂಬ ಮಾಹಿತಿಗಳು ಸದ್ಯಕ್ಕೆ ಲಭ್ಯವಾಗಿವೆ. ದಕ್ಷ ಹಾಗು ಪ್ರಾಮಾಣಿಕ ಅಧಿಕಾರಿಯಾಗಿದ್ದರಿಂದ ರಾಜಕೀಯೇತರ ವಿರೋಧಿಗಳಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ.
Advertisement
Advertisement
Advertisement
ಡಿಕೆಶಿ ಹೇಳಿದ್ದೇನು..?
ಮಧುಕರ್ ಶೆಟ್ಟಿ ನನಗೆ ಹತ್ತಿರದಿಂದ ಪರಿಚಯ. ನಮ್ಮಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಅವರ ನಿಧನ ಸುದ್ದಿ ಕೇಳಿ ಆಶ್ಚರ್ಯವಾಯ್ತು. ಅವರ ನಿಧನ ಸ್ವಾಭಾವಿಕವಾನಾ ಅಂತ ತನಿಖೆ ಮಾಡಬೇಕಾಗಿದೆ. ಪೊಲೀಸ್ ಇಲಾಖೆಗೆ ಅವರೊಂದು ದೊಡ್ಡ ಆಸ್ತಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜ್ಯದ ಒಬ್ಬ ಅಧಿಕಾರಿ ಹೊರ ರಾಜ್ಯದಲ್ಲಿ ನಿಧನ ಹೊಂದಿದ್ರೆ ಆ ಬಗ್ಗೆ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
Advertisement
ಮಧುಕರ್ ಶೆಟ್ಟಿಯವರ ಪಾರ್ಥಿವ ಶರೀರ ಬೆಂಗಳೂರಿನ ಯಲಹಂಕ ಪೊಲೀಸ್ ತರಬೇತಿ ಕೇಂದ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv