ತುಮಕೂರು: ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಗೆ ಸೇರದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು, ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಬಳಿಕ ಖಾಸಗಿ ಆಸ್ಪತ್ರೆಗೆ ರೆಫರ್ ಆಗಿರಬೇಕು. ಇವೆರಡೂ ಆಗದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದರ ಬಿಲ್ ಅನ್ನು ಸರ್ಕಾರಕ್ಕೆ ಕಳುಹಿಸಿದರೆ ಪರಿಹಾರ ನೀಡಲಾಗುವುದಿಲ್ಲ ಹಾಗೂ ಮರಣಾನಂತರ ಸಿಗುವ ಸೌಲಭ್ಯಗಳನ್ನು ಕೂಡ ನೀಡಲಾಗುವುದಿಲ್ಲ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಎಣ್ಣೆ ದರ ಭಾರೀ ಇಳಿಕೆ – ಮನೆಯಲ್ಲೇ ಮಿನಿಬಾರ್‌ಗೆ ಅನುಮತಿ
Advertisement
Advertisement
ಬುಧವಾರ ರಾಜ್ಯದಲ್ಲಿ 40,499 ಕೇಸ್ ವರದಿಯಾಗಿದ್ದು, ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಒಟ್ಟು 24,135 ಮಂದಿಗೆ ಸೋಂಕು ತಗುಲಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,84,000ಕ್ಕೆ ತಲುಪಿದೆ. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ