ಭೋಪಾಲ್: ತನ್ನ ತಂದೆ ಮೊಬೈಲ್ ರಿಚಾರ್ಜ್ ಮಾಡಿಸಿಕೊಡಲಿಲ್ಲವೆಂಬ ಕಾರಣಕ್ಕೆ 14 ವರ್ಷದ ಹುಡುಗನೊಬ್ಬ, ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಜಬ್ಬಲ್‌ಪುರ್‌ನಲ್ಲಿ ಬೆಳಕಿಗೆ ಬಂದಿದೆ.
ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ಅಂತೆಯೇ ಜಬ್ಬಲ್‌ಪುರ್‌ನ ಹುಡುಗನೊಬ್ಬ ಮೊಬೈಲ್ ವ್ಯಸನಿಯಾಗಿದ್ದು, ಡೇಟಾ ಅವಧಿ ಮುಗಿದ ಬಳಿಕ ರಿಚಾರ್ಜ್ ಮಾಡಿಸಿಕೊಡುವಂತೆ ತಂದೆಯನ್ನು ಒತ್ತಾಯಿಸಿದ್ದಾನೆ. ನಿರಂತರ ಬೇಡಿಕೆಯ ಹೊರತಾಗಿಯೂ ತನ್ನ ತಂದೆ ರೀಚಾರ್ಜ್ ಮಾಡಿಸಿರಲಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲು
Advertisement
Advertisement
ಪೊಲೀಸರು ಮಾಹಿತಿ ನೀಡಿದ್ದು, ಮೃತನ ತಂದೆ, ಕೂಲಿ ಕೆಲಸ ಮಾಡುತ್ತಿದ್ದು, ತನ್ನ ಕುಟುಂಬವನ್ನು ಪೋಷಿಸಲು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು. ಇದರಿಂದಾಗಿ ಮಗನ ಮೊಬೈಲ್ ಫೋನ್ ಡೇಟಾ ಪ್ಯಾಕ್ ರೀಚಾರ್ಜ್ ಮಾಡಿಸಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ. ಗೋರಖ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.