ಭೋಪಾಲ್: ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ ಹಕ್ಕಿ ಜ್ವರದಿಂದಾಗಿ ಕಳದ ನಾಲ್ಕು ದಿನಗಳ ಅವಧಿಯಲ್ಲಿ 48 ಕಾಗೆಗಳು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಕಾಗೆಗಳ ಸ್ಯಾಂಪಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಕಾಗೆಗಳು ಹಕ್ಕಿ ಜ್ವರದಿಂದ ಮೃತಪಟ್ಟಿವೆ (ಎಚ್5ಎನ್8) ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಅಗರ್ ಮಾಲ್ವಾ ಡಿಸಿ ಅವಧೇಶ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?
Advertisement
Advertisement
ಹಕ್ಕಿ ಜ್ವರ ಹರಡುವುದನ್ನು ನಿಯಂತ್ರಿಸಲು ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯಲ್ಲಿ ಮಟನ್ ಅಂಗಡಿಗಳನ್ನು ಬಂದ್ ಮಾಡಿಸುವ ಸಂಬಂಧ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
Advertisement
ಜಿಲ್ಲೆಯಲ್ಲಿ ಹಾಗೂ ಗಡಿ ಭಾಗಗಳಲ್ಲಿ ಪರಿಸ್ಥಿತಿ ಅವಲೋಕಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಪಕ್ಷಿಗಳ ಅಸಹಜ ಸಾವಿನ ಕುರಿತು ಮಾಹಿತಿ ಸಿಕ್ಕ ಕೂಡಲೇ ಪ್ರಕರಣ ದಾಖಲಿಸುವಂತೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಎನ್.ಕಾನ್ಸೋಟಿಯಾ ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ
Advertisement
ಚಳಿಗಾಲದ ಸಂದರ್ಭದಲ್ಲಿ ಹಕ್ಕಿ ಜ್ವರ ಹರಡುವಲ್ಲಿ ವಲಸೆ ಹಕ್ಕಿಗಳು ಮುಖ್ಯ ಕಾರಣವಾಗುತ್ತವೆ. ವಲಸೆ ಹಕ್ಕಿಗಳ ಬಗ್ಗೆ ನಿಗಾವಹಿಸಬೇಕು. ವಲಸೆ ಹಕ್ಕಿಗಳು ಹಾಗೂ ಕೋಳಿ ಮಾರುಕಟ್ಟೆಗಳಲ್ಲಿ ಸ್ಯಾಂಪಲ್ಸ್ ಪಡೆದು ಪ್ರಯೋಗಾಲಯಕ್ಕೆ ರವಾನಿಸಬೇಕು ಎಂದು ಸೂಚನೆ ನೀಡಿದ್ದಾರೆ.