– ಸಿಂಧಿಯಾಗೆ ಪಕ್ಕಾ ಆಯ್ತು ರಾಜ್ಯಸಭಾ ಸ್ಥಾನ
ಭೋಪಾಲ್: ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ ಎಂದು ಮಧ್ಯಪ್ರದೇಶ ಮಾಜಿ ಸಿಎಂ, ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿ, ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚೌಹಾಣ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ನಂಬಿ ಮತ್ತು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ನಂಬಿಕೆ, ಮಂತ್ರದ ಮೂಲ ಮಂತ್ರವನ್ನು ಅನುಸರಿಸಿ. ರಾಷ್ಟ್ರ ಮತ್ತು ಸಾರ್ವಜನಿಕರ ಸೇವೆ ಮಾಡಲು ಬಿಜೆಪಿ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ಶಾಸಕರು ನಮ್ಮ ಕುಟುಂಬ ಸೇರಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಜೆಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ
Advertisement
स्वागत है महाराज, साथ है शिवराज। @JM_Scindia
— Shivraj Singh Chouhan (@ChouhanShivraj) March 11, 2020
Advertisement
ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ದೂರ ದೃಷ್ಟಿ ಹೊಂದಿದ್ದಾರೆ. ಜನರ ಸೇವೆ ಮಾಡಲು ಅವರು ರಾಜಕೀಯಕ್ಕೆ ಬಂದಿದ್ದಾರೆ. ಅವರು 2018ರಲ್ಲಿ ನಡೆದ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪರ ಉತ್ಸಾಹದಿಂದ ಕೆಲಸ ಮಾಡಿದರು. ಆದರೆ ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಉಳಿಸಿಕೊಂಡಿಲ್ಲ. ಹೀಗಾಗಿ ಜ್ಯೋತಿರಾದಿತ್ಯ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.
Advertisement
ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರು ಬಿಜೆಪಿ ಸೇರಿದ್ದು ವೈಯಕ್ತಿಕವಾಗಿ ನನಗೆ ಸಂತೋಷದ ದಿನವಾಗಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಬಿಜೆಪಿ ಮತ್ತೆ ಮುಂದಾಗಿದೆ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದ ವೈರಸ್‍ಗೆ ಮಹಾರಾಷ್ಟ್ರಕ್ಕೆ ಪ್ರವೇಶವಿಲ್ಲ: ಶಿವಸೇನೆ
Advertisement
माननीय श्री @narendramodi जी के नेतृत्व में विश्वास करते हुए और सबका साथ, सबका विकास, सबका विश्वास के मूल मंत्र को मानते हुए श्रीमान @JM_Scindia जी राष्ट्र और जनता की सेवा के लिए @BJP4India परिवार में सम्मिलित हुए हैं। मैं उनका स्वागत करता हूं : श्री @ChouhanShivraj pic.twitter.com/6G467MwBzG
— Office of Shivraj (@OfficeofSSC) March 11, 2020
ರಾಜ್ಯಸಭೆ:
ಮುಂಬರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ಒಟ್ಟು 9 ಅಭ್ಯರ್ಥಿಗಳ ಪಟ್ಟಿಯನ್ನುಬಿಡುಗಡೆ ಮಾಡಿದೆ. ಈ ಪೈಕಿ ಮಧ್ಯಪ್ರದೇಶದಿಂದ ಬಿಜೆಪಿ ಅಭ್ಯರ್ಥಿಯಾಗಿ ಜ್ಯೋತಿರಾದಿತ್ಯ ಸಿಂಧಿಯಾ ಗುರುತಿಸಿಕೊಂಡಿದ್ದಾರೆ.
BJP announces the names of party's candidates for the upcoming election to the Rajya Sabha. https://t.co/sQItPuDotq pic.twitter.com/FAjziadv2Q
— ANI (@ANI) March 11, 2020